Wednesday, June 24, 2026
Homeಕರಾವಳಿಉಪ್ಪಿನಂಗಡಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಹಿಜಾಬ್ ವಿವಾದ: 24 ವಿದ್ಯಾರ್ಥಿನಿಯರಿಗೆ ಒಂದು ವಾರ ತರಗತಿಗೆ ನಿರ್ಬಂಧ

ಉಪ್ಪಿನಂಗಡಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಹಿಜಾಬ್ ವಿವಾದ: 24 ವಿದ್ಯಾರ್ಥಿನಿಯರಿಗೆ ಒಂದು ವಾರ ತರಗತಿಗೆ ನಿರ್ಬಂಧ

- Advertisement -
- Advertisement -

ಪುತ್ತೂರು: ಉಪ್ಪಿನಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬಂದಿದ್ದ 24 ವಿದ್ಯಾರ್ಥಿನಿಯರಿಗೆ ಒಂದು ವಾರಗಳ ಕಾಲ ತರಗತಿಗೆ ನಿರ್ಬಂಧ ವಿಧಿಸಲಾಗಿದೆ.

ಕಾಲೇಜಿನಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಲು ಪಟ್ಟು ಹಿಡಿದ ಕಾರಣ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಕಳೆದ ಹಲವು ದಿನಗಳಿಂದ ಕಾಲೇಜಿನಲ್ಲಿ ಹಿಜಾಬ್ ವಿವಾದ ನಡೆಯುತ್ತಿದ್ದು, ಕಾಲೇಜು ಅಭಿವೃದ್ಧಿ ಸಮಿತಿ ನಿರ್ಣಯದಂತೆ ವಿದ್ಯಾರ್ಥಿನಿಯರಿಗೆ ತರಗತಿಗೆ ನಿರ್ಬಂಧ ವಿಧಿಸಲಾಗಿದೆ.

ಹೈಕೋರ್ಟ್ ತೀರ್ಪು ಮತ್ತು ರಾಜ್ಯ ಸರಕಾರದ ಸುತ್ತೋಲೆ ಆಧರಿಸಿ ನಿರ್ಬಂಧ ಆದೇಶ ಹೊರಡಿಸಲಾಗಿದೆ.ಕೆಲವು ದಿನಗಳ ಹಿಂದೆ 7 ವಿದ್ಯಾರ್ಥಿನಿಯರನ್ನು ಅಮಾನತು ಮಾಡಿದ್ದ ಘಟನೆ ಕುರಿತು ವರದಿಗೆ ತೆರಳಿದ್ದ ಪತ್ರಕರ್ತರ ಮೇಲೂ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಹಲ್ಲೆ ಮಾಡಿದ್ದರು.

- Advertisement -

Latest News

error: Content is protected !!