Wednesday, June 3, 2026
Homeಕರಾವಳಿಶ್ರೀ ಕ್ಷೇತ್ರ ಧರ್ಮಸ್ಥಳದಿಂದ 25 ಲಕ್ಷ ರೂ. ನಿಧಿ ಸಮರ್ಪಣೆ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 25 ಲಕ್ಷ ರೂ. ನಿಧಿ ಸಮರ್ಪಣೆ

- Advertisement -
- Advertisement -

ಬೆಳ್ತಂಗಡಿ: ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 25 ಲಕ್ಷ ರೂ. ನಿಧಿ ಸಮರ್ಪಣೆಯನ್ನು ಮಾಡಲಾಗಿದೆ.  ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಇಂದು ಧರ್ಮಸ್ಥಳದಲ್ಲಿ ಶ್ರೀ ರಾಮಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಗೆ ಹಸ್ತಾಂತರಿಸಿದರು.

ಇಂದು ವಿಶ್ವ ಹಿಂದು ಪರಿಷತ್‌ನ ಪದಾಧಿಕಾರಿಗಳು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ, ಸಮಾಲೋಚಿಸಿದರು. ಈ ವೇಳೆ ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕಾಗಿ ಶ್ರೀ ಕ್ಷೇತ್ರದಿಂದ ಘೋಷಿಸಿದ್ದ 25 ಲಕ್ಷ ರೂ. ನಿಧಿ ಸಮರ್ಪಣೆಯ ಡಿಡಿಯನ್ನು ವಿಶ್ವ ಹಿಂದು ಪರಿಷತ್ ರಾಷ್ಟ್ರೀಯ ಕಾರ್ಯದರ್ಶಿ ರಾಘವನ್ ಅವರಿಗೆ ಡಾ.ಹೆಗ್ಗಡೆ ಹಸ್ತಾಂತರಿಸಿದರು.

ಈ ಸಂದರ್ಭ ವಿಶ್ವ ಹಿಂದೂ ಪರಿಷತ್ ದಕ್ಷಿಣ ಪ್ರಾಂತ ಅಧ್ಯಕ್ಷ ಎಂ.ಬಿ. ಪುರಾಣಿಕ್, ಪ್ರಾಂತ ಸಹ ಕಾರ್ಯದರ್ಶಿ ಕೃಷ್ಣಮೂರ್ತಿ, ಮಂಗಳೂರು ಜಿಲ್ಲಾಧ್ಯಕ್ಷ ಗೋಪಾಲ ಕುತ್ತಾರ್, ಪುತ್ತೂರು ಜಿಲ್ಲಾ ಕಾರ್ಯಾಧ್ಯಕ್ಷ ಭಾಸ್ಕರ್ ಧರ್ಮಸ್ಥಳ, ಅಧ್ಯಕ್ಷ ಡಾ. ಪ್ರಸನ್ನ ಕುಮಾರ್, ಬೆಳ್ತಂಗಡಿ ಉಪಾಧ್ಯಕ್ಷ ಶ್ರೀಧರ್ ಗುಡಿಗಾರ್, ಅಯೋಧ್ಯೆ ಅಭಿಯಾನದ ಉಜಿರೆ ಸಂಚಾಲಕ ಹರೀಶ್ ರಾವ್ ಇತರರು ಉಪಸ್ಥಿತರಿದ್ದರು.

- Advertisement -

Latest News

error: Content is protected !!