Thursday, June 4, 2026
Homeಕರಾವಳಿಕರಾವಳಿಯಲ್ಲಿ ಹತ್ಯೆಗೀಡಾದ ಮಸೂದ್, ಫಾಝಿಲ್, ಜಲೀಲ್, ದೀಪಕ್ ರಾವ್ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ...

ಕರಾವಳಿಯಲ್ಲಿ ಹತ್ಯೆಗೀಡಾದ ಮಸೂದ್, ಫಾಝಿಲ್, ಜಲೀಲ್, ದೀಪಕ್ ರಾವ್ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಿಸಿದ ರಾಜ್ಯ ಸರಕಾರ

- Advertisement -
- Advertisement -

ಮಂಗಳೂರು:ದ.ಕ.ಜಿಲ್ಲೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿ ಸರ್ಕಾರದಿಂದ ಪರಿಹಾರ ಸಿಗದ ನಾಲ್ವರು ಯುವಕರ ಕುಟುಂಬಗಳಿಗೆ ಮುಖ್ಯಮಂತ್ರಿಯ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಕಳೆದ ಜುಲೈ 19ರಂದು ಕೊಲೆಯಾದ ಬೆಳ್ಳಾರೆಯ ಮಸೂದ್, 28ರಂದು ಮಂಗಳಪೇಟೆಯ ಮುಹಮ್ಮದ್ ಫಾಝಿಲ್, ಕಳೆದ ವರ್ಷ ಡಿಸೆಂಬರ್ 24ರಂದು ಕೊಲೆಯಾದ ಕಾಟಿಪಳ್ಳದ ಅಬ್ದುಲ್ ಜಲೀಲ್ ಹಾಗೂ 2018ರ ಜನವರಿ 3ರಂದು ಹತ್ಯೆಯಾದ ಕಾಟಿಪಳ್ಳದ ದೀಪಕ್ ರಾವ್ ಅವರ ಕುಟುಂಬಕ್ಕೆ ಸರ್ಕಾರ ಪರಿಹಾರ ಘೋಷಿಸಿದೆ.

ರಾಜ್ಯ ಪೊಲೀಸ್ ಇಲಾಖೆಯ ಮಹಾನಿರ್ದೇಶಕರು ಸರಕಾರದ ವತಿಯಿಂದ ಪರಿಹಾರ ಧನ ಮಂಜೂರು ಮಾಡುವಂತೆ ಒಳಾಡಳಿತ ಇಲಾಖೆಯನ್ನು ಕೋರಿದ್ದರು. ಅದರಂತೆ ಪರಿಹಾರ ಬಿಡುಗಡೆ ಮಾಡಲಾಗಿದೆ. ನೂತನ ಸರಕಾರ ಬಂದ ಬಳಿಕ ಪರಿಹಾರ ನೀಡಲು ಆಗ್ರಹ ಕೇಳಿ ಬಂದಿತ್ತು.ಅದರ ಬೆನ್ನಲ್ಲೇ ಸರ್ಕಾರ ಪರಿಹಾರ ಘೋಷಿಸಿದೆ.

- Advertisement -

Latest News

error: Content is protected !!