- Advertisement -
- Advertisement -
ಕಾರವಾರ ಏ. 05: ಕೋವಿಡ್ -19 ವಿರುದ್ಧ ಹೋರಾಡುತ್ತಿರುವ ಉತ್ತರ ಕನ್ನಡ ಜಿಲ್ಲೆಯ ಎಲ್ಲ ಭಾಗದ ಸರಕಾರಿ ಆರೋಗ್ಯಾಧಿಕಾರಿ, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ, ಆಶಾಕಾರ್ಯಕರ್ತೆಯರಿಗೆ ಮತ್ತು ಪೌರ ಕಾರ್ಮಿಕರಿಗೆ ಅಗತ್ಯವಾಗಿ ಬೇಕಾಗಿದ್ದ ಒಟ್ಟು 25 ಸಾವಿರ ತ್ರಿ ಲೇಯರ್ ಮಾಸ್ಕ್ ಹಾಗೂ 720 ಲೀಟರ್ ಸ್ಯಾನಿಟೈಸರ್ ನ್ನು ಹಳಿಯಲಾದ ವಿ. ಆರ್. ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಇಂದು ಉತ್ತರ ಕನ್ನಡ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಯಿತು.
ಜಿಲ್ಲಾಧಿಕಾರಿ ಡಾ. ಹರೀಶ ಕುಮಾರ ಕೆ. ಅವರು ಮಾಸ್ಕ್ ಹಾಗೂ ಸ್ಯಾನಿಟೈಸರ್ ಸ್ವೀಕರಿಸಿದರು. ವಿ. ಆರ್. ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್ ಜಿಲ್ಲಾಡಳಿತಕ್ಕೆ ಅಗತ್ಯ ಸಂದರ್ಭದಲ್ಲಿ ವಿತರಿಸಿರುವುದು ಶ್ಲಾಘನೀಯ ಎಂದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ನಾಗರಾಜ ಸಿಂಗ್ರೇರ್ ಉಪಸ್ಥಿತರಿದ್ದರು.
- Advertisement -