Thursday, June 4, 2026
Homeಆರಾಧನಾಧರ್ಮಸ್ಥಳದಲ್ಲಿ 26 ನೇ ವರ್ಷದ ಭಜನಾ ತರಬೇತಿ ಕಮ್ಮಟ; ಪೂಜ್ಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯಿಂದ ಉದ್ಘಾಟನೆ

ಧರ್ಮಸ್ಥಳದಲ್ಲಿ 26 ನೇ ವರ್ಷದ ಭಜನಾ ತರಬೇತಿ ಕಮ್ಮಟ; ಪೂಜ್ಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯಿಂದ ಉದ್ಘಾಟನೆ

- Advertisement -
- Advertisement -

ಬೆಳ್ತಂಗಡಿ: ಸೆ.22 ರಿಂದ 29 ರ ವರೆಗೆ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಲಿರುವ 26 ನೇ ವರ್ಷದ ಭಜನಾ ತರಬೇತಿ ಕಮ್ಮಟಕ್ಕೆ ರವಿವಾರ ಕ್ಷೇತ್ರದ ಮಹೋತ್ಸವ ಸಭಾಭವನದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆಯಲ್ಲಿ ಮೂಡುಬಿದ್ರೆ ಜೈನಮಠದ ಪೂಜ್ಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಚಾಲನೆ ನೀಡಿದರು.

ನಂತರದಲ್ಲಿ ಮಾತನಾಡಿದ ಅವರು, ’ಧರ್ಮಸ್ಥಳ ಕ್ಷೇತ್ರದ ಮುಖೇನ ಎಲ್ಲ ಧರ್ಮದ ಆಧ್ಯಾತ್ಮಿಕ ಕ್ಷೇತ್ರವಾಗಿ ಸಂದೇಶ ಸಾರಿದ್ದಾರೆ. ಧರ್ಮಸ್ಥಳವೂ ಆಧ್ಯಾತ್ಮ ಸಂಸ್ಕಾರ ನೀಡುವ ಅನೇಕ ಮಠ ಮಾನ್ಯಗಳಲ್ಲಿ ಒಂದು. ಇಲ್ಲಿ ಭಜನೆಯ ಕಮ್ಮಟ ನಡೆಯುತ್ತದೆ. ಭಗವಂತನ ಕಡೆಗೆ ಆತನ ಮಹಿಮೆಯನ್ನು ಸ್ತುತಿಸುವುದಾಗಿದೇ ಭಜನೆ,” ಎಂದರು.

ಮಾಣಿಲದ ಮೋಹನದಾಸ ಸ್ವಾಮೀಜಿ ಶುಭಾಶಂಸನೆ ಮಾಡಿದರು. ಈ ಸಂದರ್ಭದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಪಾಧ್ಯಕ್ಷೆ ಡಾ.ಹೇಮಾವತಿ ವೀ.ಹೆಗ್ಗಡೆ, ಡಿ.ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಭಜನಾ ಪರಿಷತ್ ಅಧ್ಯಕ್ಷ ಚಂದ್ರಶೇಖರ್ ಸಾಲ್ಯಾನ್, ಉಪಾಧ್ಯಕ್ಷ ರಾಜೇಂದ್ರ ಪ್ರಸಾದ್, ಭಜನಾ ಕಮ್ಮಟದ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಮತ್ತು ಕಾರ್ಯದರ್ಶಿ ಎ.ವಿ. ಶೆಟ್ಟಿ ಹಾಗೂ ಭಜನಾ ಪರಿಷತ್ ಅಧ್ಯಕ್ಷ ಚಂದ್ರಶೇಖರ ಸಾಲಿಯಾನ್ ಉಪಸ್ಥಿತರಿದ್ದರು.

ನೃತ್ಯರೂಪಕ ಮೂಲಕ ಚೈತ್ರಾ ಧರ್ಮಸ್ಥಳ ಮತ್ತು ತಂಡದವರು ಪ್ರಾರ್ಥನೆಯನ್ನ ಸಲ್ಲಿಸಿದರು. ಕಾರ್ಯಕ್ರಮವನ್ನು ಕೃಷಿ ಅಧಿಕಾರಿ ರಾಮ್ ಕುಮಾರ್ ನಿರೂಪಿಸಿದರು‌.

ಕಮ್ಮಟದ ವಿಶೇಷತೆ: ಭಜನಾ ತರಬೇತಿಯಲ್ಲಿ ಶೃತಿ, ರಾಗ, ತಾಳ, ಲಯ ಬದ್ಧವಾಗಿ ಹಾಡುವ ವಿಧಾನ, ನೃತ್ಯಭಜನೆ, ಪ್ರಾತ್ಯಕ್ಷಿಕೆ, ತಜ್ಞರಿಂದ ಉಪನ್ಯಾಸ, ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದ್ದು, ಭಜನಾ ಕಮ್ಮಟದಲ್ಲಿ ರಾಜ್ಯದ ಒಟ್ಟು 34 ತಾಲೂಕಿನ 169 ಮಂದಿ ಭಾಗವಹಿಸಿದ್ದಾರೆ. ಸೆ.29 ರಂದು 300 ಭಜನಾ ತಂಡಗಳ 500 ಭಜನಾಪಟುಗಳಿಂದ ಶೋಭಾಯಾತ್ರೆ ಹಾಗೂ ಅಮೃತವರ್ಷಿಣಿ ಸಭಾಭವನದಲ್ಲಿ ನೃತ್ಯ ಭಜನೆಯೊಂದಿಗೆ ಭಜನೋತ್ಸವ ನಡೆಯಲಿದ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!