Saturday, May 18, 2024
Homeಕರಾವಳಿಉಡುಪಿಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ರಸ್ತೆ ಅಭಿವೃದ್ಧಿಗೆ 279.03 ಕೋಟಿ ರೂ. ಅನುದಾನ ಮಂಜೂರು

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ರಸ್ತೆ ಅಭಿವೃದ್ಧಿಗೆ 279.03 ಕೋಟಿ ರೂ. ಅನುದಾನ ಮಂಜೂರು

spot_img
- Advertisement -
- Advertisement -

ನವದೆಹಲಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ರಸ್ತೆ ಅಭಿವೃದ್ಧಿಗೆ ಒಟ್ಟು 279.03 ಕೋಟಿ ರೂಪಾಯಿಗಳ ಅನುದಾನಗಳನ್ನು ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಮಂಜೂರು ಮಾಡಿ ಆದೇಶ ಹೊರಡಿಸಿದೆ.

ರಾಷ್ಟ್ರೀಯ ಹೆದ್ದಾರಿ 169 ರಲ್ಲಿ ಮೇಗರವಳ್ಳಿಯಿಂದ ಆಗುಂಬೆವರೆಗೆ ಅಸ್ತಿತ್ವದಲ್ಲಿರುವ ರಸ್ತೆಯನ್ನು ದ್ವಿಪಥ ರಸ್ತೆಯನ್ನಾಗಿ ವಿಸ್ತರಿಸಲು 96.20 ಕೋಟಿ ರೂ., ಮಾಳ ಗೇಟ್ ನಿಂದ ಕಾರ್ಕಳ ವರೆಗೆ ದ್ವಿಪಥ ರಸ್ತೆಯನ್ನು ಚತುಷ್ಪಥಗೊಳಿಸಲು 177.94 ಕೋಟಿ ರೂ. ಮತ್ತು ರಾಷ್ಟ್ರೀಯ ಹೆದ್ದಾರಿ 766 ಸಿ ಯಲ್ಲಿ ಬೈಂದೂರು-ರಾಣೆಬೆನ್ನೂರು ವಿಭಾಗದಲ್ಲಿ ರಸ್ತೆ ಸುರಕ್ಷತಾ ಕಾಮಗಾರಿಗೆ 4.89 ಕೋಟಿ ರೂ.‌ ಮಂಜೂರು ಮಾಡಲಾಗಿದೆ.

ಕ್ಷೇತ್ರದಲ್ಲಿನ ರಾಷ್ಟೀಯ ಹೆದ್ದಾರಿಗಳ ಅಭಿವೃದ್ಧಿಯ ಕುರಿತು ಈ ಹಿಂದೆ ಜನವರಿ ತಿಂಗಳಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿಯವರನ್ನು ಭೇಟಿಯಾಗಿ ಮನವಿಯನ್ನು ಸಲ್ಲಿಸಿ, ಅತೀ ಶೀಘ್ರದಲ್ಲಿ ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗೆ ಅನುದಾನಗಳನ್ನು ಬಿಡುಗಡೆ ಮಾಡುವಂತೆ ಕೇಳಿಕೊಂಡಿದ್ದರು

ಸಂಸದೆ ಶೋಭಾ ಕರಂದ್ಲಾಜೆ ಕೋರಿಕೆ ಪರಿಗಣಿಸಿ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ
ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಹು ಬೇಡಿಕೆಯ ರಸ್ತೆಗಳನ್ನ ಅಭಿವೃದ್ಧಿಪಡಿಸಲು ಅನುಮೋದನೆ ನೀಡಿ, ಅನುದಾನಗಳನ್ನು ಬಿಡುಗಡೆ ಮಾಡಿದ್ದಾರೆ.

- Advertisement -
spot_img

Latest News

error: Content is protected !!