Friday, June 5, 2026
Homeಕರಾವಳಿಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ 28 ಕೋಟಿ ರೂ. ಅಭಿವೃದ್ಧಿ ಕಾಮಗಾರಿಗೆ ಚಾಲನೆ

ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ 28 ಕೋಟಿ ರೂ. ಅಭಿವೃದ್ಧಿ ಕಾಮಗಾರಿಗೆ ಚಾಲನೆ

- Advertisement -
- Advertisement -

ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಇಪ್ಪತ್ತೆಂಟು ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.

ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಶ್ರೀ ಕ್ಷೇತ್ರ ಪೊಳಲಿ ದೇವಸ್ಥಾನದ ಹಿಂಭಾಗದಲ್ಲಿ 40 ಲಕ್ಷ ರೂಪಾಯಿ ವೆಚ್ಚದ ಒಳಚರಂಡಿ ಕಾಮಗಾರಿ, 10 ಲಕ್ಷ ರೂಪಾಯಿ ವೆಚ್ಚದ ಶ್ರೀ ರಾಮಕೃಷ್ಣ ತಪೋವನ ಸಂಪರ್ಕ ರಸ್ತೆ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯ ಬಂಟ್ವಾಳದ 56 ಗ್ರಾಮಗಳ 231 ರಸ್ತೆಗಳ ಕಾಮಗಾರಿಗಳು ಇದರಲ್ಲಿ ಒಳಗೊಂಡಿವೆ.

ಈ ಸಂದರ್ಭದಲ್ಲಿ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿ, ಬಿಜೆಪಿ ಮಂಡಲ ಅಧ್ಯಕ್ಷ ದೇವಪ್ಪ ಪೂಜಾರಿ, ಬಂಟ್ವಾಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದೇವದಾಸ್ ಶೆಟ್ಟಿ ಉಪಸ್ಥಿತರಿದ್ದರು.

- Advertisement -

Latest News

error: Content is protected !!