Wednesday, May 1, 2024
Homeಕರಾವಳಿಉಡುಪಿಉಡುಪಿ ಜಿಲ್ಲೆಯಲ್ಲಿ  ಮಳೆಯಿಂದ 28 ಕೋಟಿ ನಷ್ಟ:ವೀಡಿಯೋ ಕಾನ್ಫರೆನ್ಸ್ ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ...

ಉಡುಪಿ ಜಿಲ್ಲೆಯಲ್ಲಿ  ಮಳೆಯಿಂದ 28 ಕೋಟಿ ನಷ್ಟ:ವೀಡಿಯೋ ಕಾನ್ಫರೆನ್ಸ್ ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ

spot_img
- Advertisement -
- Advertisement -

ಬೆಂಗಳೂರು: ಉಡುಪಿ ಜಿಲ್ಲೆಯಾದ್ಯಂತ ಮಳೆ‌ ಆರ್ಭಟದಿಂದ ಇದುವರೆಗೂ 9 ಮಂದಿ ಸಾವನ್ನಪ್ಪಿದ್ದು, ಸುಮಾರು 28 ಕೋಟಿ ಮೌಲ್ಯದ ಆಸ್ತಿ ನಷ್ಟ ಉಂಟಾಗಿದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ  ಮಳೆಯಿಂದ 28 ಕೋಟಿ ನಷ್ಟ:ವೀಡಿಯೋ ಕಾನ್ಫರೆನ್ಸ್ ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ರಾಜ್ಯದ ಹವಾಮಾನ, ಮಳೆ ಹಾಗೂ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಪರಿಶೀಲಿಸಲು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವೀಡಿಯೋ ಸಂವಾದದಲ್ಲಿ ಪಾಲ್ಗೊಂಡ ವೇಳೆ ಈ ಮಾಹಿತಿ ನೀಡಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಪ್ರತಿ ವರ್ಷವೂ ಮಳೆಯಿಂದ ಅನಾಹುತಗಳು ಸಂಭವಿಸುತ್ತಿವೆ. ಇನ್ನು ಮುಂದೆ ಇಂತಹ ಯಾವುದೇ ಅನಾಹುತ ಆಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಸಿಎಂ ಅಧಿಕಾರಿಗಳಿಗೆ ಸೂಚಿಸಿದರು.

ಅಲ್ಲದೇ, ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಲಾಗುವುದು, ಶೀಘ್ರವೇ ಉಡುಪಿ ಜಿಲ್ಲೆಯ ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

- Advertisement -
spot_img

Latest News

error: Content is protected !!