- Advertisement -
- Advertisement -
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೆ. 28ರಿಂದ ನಡೆಯುತ್ತಿರುವ 28ನೇ ವರ್ಷದ ಭಜನಾ ಕಮ್ಮಟದ ಸಮಾರೋಪ ಸಮಾರಂಭ ಇಂದು ನಡೆಯಲಿದೆ.ಸಮಾರೋಪ ಸಮಾರಂಭದ ಹಿನ್ನೆಲೆಯಲ್ಲಿ ಅ.3 ಶನಿವಾರ ಮೈಸೂರಿನ ಸುತ್ತೂರು ಮಠದ ಪೂಜ್ಯ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಯವರು ಭಜನಾ ಕಮ್ಮಟಕ್ಕೆ ಭೇಟಿ ನೀಡಿ, ಶಿಬಿರಾರ್ಥಿಗಳಿಗೆ ನೀಡಲಾಗುತ್ತಿರುವ ಭಜನಾ ತರಬೇತಿಯನ್ನು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಮಾಣಿಲದ ಪೂಜ್ಯ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಉಪಸ್ಥಿತರಿದ್ದರು.
ಶಿಬಿರಾರ್ಥಿಗಳಿಗೆ ಶಿಸ್ತುಬದ್ಧವಾಗಿ ಭಜನಾ ತರಬೇತಿ ನೀಡುತ್ತಿರುವುದನ್ನು ವೀಕ್ಷಿಸಿದ ಪೂಜ್ಯ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಯವರು ಮೆಚ್ಚುಗೆ ವ್ಯಕ್ತಪಡಿಸಿದರು.
- Advertisement -


