Thursday, May 2, 2024
Homeಕರಾವಳಿಉಡುಪಿದ್ವಿತೀಯ ಪಿಯುಸಿ ಗಣಿತ ಪರೀಕ್ಷೆಗೆ ದ.ಕ. ಜಿಲ್ಲೆಯಲ್ಲಿ 65, ಉಡುಪಿ ಜಿಲ್ಲೆಯಲ್ಲಿ 29 ವಿದ್ಯಾರ್ಥಿಗಳು ಗೈರು

ದ್ವಿತೀಯ ಪಿಯುಸಿ ಗಣಿತ ಪರೀಕ್ಷೆಗೆ ದ.ಕ. ಜಿಲ್ಲೆಯಲ್ಲಿ 65, ಉಡುಪಿ ಜಿಲ್ಲೆಯಲ್ಲಿ 29 ವಿದ್ಯಾರ್ಥಿಗಳು ಗೈರು

spot_img
- Advertisement -
- Advertisement -

ಮಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಎರಡನೇ ದಿನವಾದ ಇಂದು ಶಿಕ್ಷಣ ಶಾಸ್ತ್ರ ಮತ್ತು ಗಣಿತ ಶಾಸ್ತ್ರದ ಪರೀಕ್ಷೆಗಳು ನಡೆದಿವೆ.

ಉಡುಪಿ ಜಿಲ್ಲೆಯಲ್ಲಿ ಶಿಕ್ಷಣ ಶಾಸ್ತ್ರದ ಪರೀಕ್ಷೆಗೆ ನೋಂದಾಯಿತ 13 ಹೊಸ ವಿದ್ಯಾರ್ಥಿಗಳ ಪೈಕಿ 13 ವಿದ್ಯಾರ್ಥಿಗಳೂ ಪರೀಕ್ಷೆ ಬರೆದಿದ್ದಾರೆ‌. ಈ ಪೈಕಿ ಖಾಸಗಿಯಾಗಿ ಪರೀಕ್ಷೆ ಬರೆದಿದ್ದ ಒಬ್ಬ ವಿದ್ಯಾರ್ಥಿ ಕೂಡಾ ಹಾಜರಾಗಿದ್ದಾರೆ. ಗಣಿತ ಶಾಸ್ತ್ರದ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 11,692 ವಿದ್ಯಾರ್ಥಿಗಳ ಪೈಕಿ 65 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಪುನರಾವರ್ತಿತ ವಿದ್ಯಾರ್ಥಿಗಳ ಪೈಕಿ 31 ವಿದ್ಯಾರ್ಥಿಗಳು ಗೈರಾಗಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಗಣಿತ ಪರೀಕ್ಷೆಗೆ 5288 ವಿದ್ಯಾರ್ಥಿಗಳ ಪೈಕಿ 29 ವಿದ್ಯಾರ್ಥಿಗಳು ಗೈರಾಗಿದ್ದರೆ, ಪುನರಾವರ್ತಿತ ವಿದ್ಯಾರ್ಥಿಗಳ ಪೈಕಿ 8 ವಿದ್ಯಾರ್ಥಿಗಳು ಗೈರಾಗಿದ್ದಾರೆ.

- Advertisement -
spot_img

Latest News

error: Content is protected !!