Sunday, May 5, 2024
Homeತಾಜಾ ಸುದ್ದಿಮುಸ್ಲಿಮರಿಗೆ ಇದ್ದ 2B ಮೀಸಲಾತಿಯನ್ನು ರದ್ದುಪಡಿಸಿ ರಾಜ್ಯ ಸರಕಾರ ಆದೇಶ

ಮುಸ್ಲಿಮರಿಗೆ ಇದ್ದ 2B ಮೀಸಲಾತಿಯನ್ನು ರದ್ದುಪಡಿಸಿ ರಾಜ್ಯ ಸರಕಾರ ಆದೇಶ

spot_img
- Advertisement -
- Advertisement -

ಬೆಂಗಳೂರು;  ಹಿಂದುಳಿದ ವರ್ಗಗಳ ಪ್ರವರ್ಗ 2B ಅಡಿಯಲ್ಲಿ ಮುಸ್ಲಿಮರಿಗೆ ಇದ್ದ ಶೇ.4ರಷ್ಟು ಮೀಸಲಾತಿಯನ್ನು ರದ್ದುಪಡಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ‌.

ಸಂಪುಟ ಸಭೆಯ ನಂತರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, 2b ಧಾರ್ಮಿಕ ಅಲ್ಪಸಂಖ್ಯಾತರಿಗೆ ಮೀಸಲಾತಿ ಇಲ್ಲ.ಅವರಿಗೆ ಅನ್ಯಾಯವಾಗದಂತೆ Ews ಗೆ ಶಿಫ್ಟ್ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಹೇಳಿದ್ದಾರೆ.

ಇದೇ ವೇಳೆ 2C ಅಡಿ ಒಕ್ಕಲಿಗರಿಗೆ ಶೇಕಡಾ 6ರಷ್ಟು ಮೀಸಲಾತಿ ಹಾಗೂ 2D ಅಡಿ ಲಿಂಗಾಯತರಿಗೆ ಶೇಕಡಾ 7ರಷ್ಟು ಮೀಸಲಾತಿ ನೀಡಲಾಗುವುದು ಎಂದು ತಿಳಿಸಿದರು.

ಗುಂಪು ಒಂದರಲ್ಲಿ ಆದಿಜಾಂಬವ ಸಮುದಾಯಕ್ಕೆ ಶೇ 6ರಷ್ಟು ಮೀಸಲಾತಿ, ಗುಂಪು 2 ರಲ್ಲಿ ಆದಿಕರ್ನಾಟಕ ಸಮುದಾಯಕ್ಕೆ ಶೇ 5.5ರಷ್ಟು ಮೀಸಲಾತಿ, ಗುಂಪು 3ರಲ್ಲಿ ಬಂಜಾರ, ಬೋವಿ, ಕೊರಚರಿಗೆ ಶೇ 4.5ರಷ್ಟು ಮೀಸಲಾತಿ, ಗುಂಪು 4ರಲ್ಲಿರುವ ಮತ್ತಿತರರಿಗೆ ಶೇ.1ರಷ್ಟು ಮೀಸಲಾತಿ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

- Advertisement -
spot_img

Latest News

error: Content is protected !!