Monday, May 17, 2021
Homeತಾಜಾ ಸುದ್ದಿಮೇ 24 ರಿಂದ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ: ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆ...

ಮೇ 24 ರಿಂದ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ: ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೇ ಪಾಸ್

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಆರ್ಭಟ ಹೆಚ್ಚಾಗುತ್ತಿರುವ ಹಿನ್ನೆಲೆ ಮೇ 24 ರಿಂದ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ ಮಾಡಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಹೇಳಿದ್ದಾರೆ. ಅಲ್ಲದೇ ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಪರೀಕ್ಷಾ ದಿನಾಂಕಗಳನ್ನು ಪರೀಕ್ಷೆಗಳು ಆರಂಭವಾಗುವುದಕ್ಕೆ 15-20 ದಿನಗಳ ಮುನ್ನವೇ ಪ್ರಕಟಿಸಲಾಗುವುದು ಎಂದರು. ಈಗಾಗಲೇ ಪರೀಕ್ಷೆಗೆ ಸಜ್ಜಾಗಿದ್ದ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವುದರಿಂದ ಯಾವುದೇ ಕಾರಣಕ್ಕೂ ವಿಚಲಿತರಾಗದೇ ಶ್ರದ್ಧೆಯಿಂದ ತಮ್ಮ ವಿದ್ಯಾಭ್ಯಾಸವನ್ನು ಎಂದಿನಂತೆ ಮುಂದುವರೆಸಬೇಕೆಂದು ಅವರು ಮನವಿ ಮಾಡಿದ್ದಾರೆ.

ಅಲ್ಲದೇ ಪ್ರಥಮ ಪಿಯುಸಿ ವಿದ್ಯಾರ್ಥಿಗಳನ್ನು ಪರೀಕ್ಷೆ ನಡೆಸದೇ ಪಾಸ್ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ. ಇನ್ನುಪರೀಕ್ಷೆಗಳನ್ನು ಮುಂದೂಡಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಸತತವಾಗಿ ಸಂಪರ್ಕದಲ್ಲಿರುವಂತೆ ಉಪನ್ಯಾಸಕರಿಗೆ ವರ್ಕ್ ಫ್ರಂ ಹೋಂ ಕೆಲಸ ಮಾಡಲು ಸೂಚಿಸಲಾಗಿದೆ. ವಿದ್ಯಾರ್ಥಿಗಳೊಂದಿಗೆ ನಿರಂತರ ಸಂಪರ್ಕ, ಇಲಾಖೆಯ ಪಠ್ಯ ಬೋಧನಾ ಕ್ರಮಗಳನ್ನು ಅವರೊಂದಿಗೆ ಚರ್ಚಿಸುವುದು ಸೇರಿದಂತೆ ಎಲ್ಲ ಆಡಳಿತಾತ್ಮಕ ಕ್ರಮಗಳಿಗೆ ಉಪನ್ಯಾಸಕರು ಸದಾ ಲಭ್ಯವಾಗಬೇಕಿದೆ. ಹಾಗೆಯೇ ಕೋವಿಡ್ ಕರ್ತವ್ಯಗಳಲ್ಲಿ ತೊಡಗಿಸಿಕೊಂಡಿರುವ ಉಪನ್ಯಾಸಕರು ತಮ್ಮ ಕೋವಿಡ್ ಜವಾಬ್ದಾರಿಗಳನ್ನು ಪೂರೈಸಬೇಕಿದೆ ಎಂದು ಸುರೇಶ್ ಕುಮಾರ್ ಹೇಳಿದರು.

- Advertisement -
- Advertisment -

Latest News

error: Content is protected !!