Wednesday, August 26, 2026
Homeಕರಾವಳಿಮಂಗಳೂರುಸುಳ್ಯ: ಲಾರಿ ಮಗುಚಿ ಬಿದ್ದು ಮೂವರಿಗೆ ಗಂಭೀರ ಗಾಯ

ಸುಳ್ಯ: ಲಾರಿ ಮಗುಚಿ ಬಿದ್ದು ಮೂವರಿಗೆ ಗಂಭೀರ ಗಾಯ

- Advertisement -
- Advertisement -

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಬದಿ ನಿಲ್ಲಿಸಿದ್ದ ಪ್ರವಾಸಿಗರ ಟೆಂಪೋ ಟ್ರಾವೆಲರ್ (ಟಿಟಿ) ಮೇಲೆ ಮಗುಚಿ ಬಿದ್ದು, ಮೂವರು ತೀವ್ರವಾಗಿ ಗಾಯಗೊಂಡ ಘಟನೆ ಬುಧವಾರ ಸಂಜೆ ದೇವರಕೊಲ್ಲಿ ಸಮೀಪದ ಅಬ್ಬಿ ಫಾಲ್ಸ್ ಬಳಿ ನಡೆದಿದೆ.

ಗುಜರಾತ್‌ನ ಅಹಮದಾಬಾದ್ ಮೂಲದ 7 ಜನರ ಪ್ರವಾಸಿಗರ ತಂಡ ಮಡಿಕೇರಿಯಿಂದ ಮಂಗಳೂರಿಗೆ ಟಿಟಿಯಲ್ಲಿ ತೆರಳುತ್ತಿತ್ತು. ವಿಶ್ರಾಂತಿಗಾಗಿ ರಸ್ತೆ ಬದಿ ವಾಹನ ನಿಲ್ಲಿಸಿದ್ದಾಗ, ಸುಳ್ಯದ ಕಡೆಗೆ ಸಾಗುತ್ತಿದ್ದ ಲಾರಿ ನಿಯಂತ್ರಣ ತಪ್ಪಿ ಟಿಟಿ ಮೇಲೆ ಮಗುಚಿ ಬಿದ್ದಿದೆ.

ಅಪಘಾತದಲ್ಲಿ ಟಿಟಿಯಲ್ಲಿದ್ದ ಓರ್ವ ಪ್ರವಾಸಿಗ, ಲಾರಿ ಚಾಲಕ ಹಾಗೂ ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯಿಂದ ಎರಡೂ ವಾಹನಗಳು ಜಖಂಗೊಂಡಿದ್ದು, ಸ್ಥಳೀಯರು ಹಾಗೂ ಪೊಲೀಸರು ಗಾಯಾಳುಗಳನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪೊಲೀಸರು ಕ್ರೇನ್ ಬಳಸಿ ಲಾರಿಯನ್ನು ತೆರವುಗೊಳಿಸಿ, ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಿದರು.

- Advertisement -

Latest News

error: Content is protected !!