Monday, June 8, 2026
Homeಕರಾವಳಿಉಡುಪಿಕರಾವಳಿ, ಮಲೆನಾಡು, ಕೊಡಗು, ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೂ 3 ದಿನ ಮಳೆ: ಯೆಲ್ಲೋ ಅಲರ್ಟ್...

ಕರಾವಳಿ, ಮಲೆನಾಡು, ಕೊಡಗು, ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೂ 3 ದಿನ ಮಳೆ: ಯೆಲ್ಲೋ ಅಲರ್ಟ್ ಘೋಷಣೆ

- Advertisement -
- Advertisement -

ರಾಜ್ಯದಲ್ಲಿ ಇನ್ನೊಂದು ವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕಳೆದ ತಿಂಗಳು ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪೀಡಿತ ಮಳೆಯಾಗಿದ್ದು ನಂತರ ಸ್ವಲ್ಪ ದಿನಗಳ ಕಾಲ ವರುಣ ದೇವ ಕೊಂಚ ಬಿಡುವು ಕೊಟ್ಟಿದ್ದ.

ಇದೀಗ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲಿ ಮತ್ತೆ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮಳೆ ಮುಂದುವರೆಯಲಿದೆ. ಹೀಗಾಗಿ, ಆಗಸ್ಟ್​ 25ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜೊತೆಗೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಇನ್ನು 3 ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಸಮುದ್ರದಲ್ಲಿ ಇಂದಿನಿಂದ 3 ದಿನ ಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆಯಿದೆ. ಕರಾವಳಿಯಲ್ಲಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

- Advertisement -

Latest News

error: Content is protected !!