Thursday, June 4, 2026
Homeಕರಾವಳಿಉಡುಪಿದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ: ದ.ಕ. ಮತ್ತು ಉಡುಪಿ ಜಿಲ್ಲೆಯಿಂದ ವಾಣಿಜ್ಯ ವಿಭಾಗದಲ್ಲಿ 3,...

ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ: ದ.ಕ. ಮತ್ತು ಉಡುಪಿ ಜಿಲ್ಲೆಯಿಂದ ವಾಣಿಜ್ಯ ವಿಭಾಗದಲ್ಲಿ 3, ವಿಜ್ಞಾನ ವಿಭಾಗದಲ್ಲಿ 5 ವಿದ್ಯಾರ್ಥಿಗಳು ಟಾಪ್ 10 ಲಿಸ್ಟ್ ನಲ್ಲಿ

- Advertisement -
- Advertisement -

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ವಾಣಿಜ್ಯ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂವರು 595 ಅಂಕ ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು 597 ಮತ್ತು ಉಡುಪಿ ಜಿಲ್ಲೆಯ ಒಬ್ಬ ವಿದ್ಯಾರ್ಥಿ 597 ಮತ್ತು ಇಬ್ಬರು 596 ಅಂಕ ಪಡೆದಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಸಮರ್ಥ್ ವಿಶ್ವನಾಥ ಜೋಷಿ 595 ಅಂಕ, ಮಂಗಳೂರಿನ ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನ ಅನಿಷಾ ಮಲ್ಯ 595 ಅಂಕ ಮತ್ತು ಮಂಗಳೂರಿನ ಕೆನರಾ ಪದವಿ ಪೂರ್ವ ಕಾಲೇಜಿನ ಅಚಲ್ ಪ್ರವೀಣ್ ಉಳ್ಳಾಲ್ 595 ಅಂಕ ಪಡೆದಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿ‌ ಇಲಮ್ 597 ಅಂಕ, ಮೂಡಬಿದಿರೆಯ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಶ್ರೀಕೃಷ್ಣ ಪೆಜತ್ತಾಯ 597 ಅಂಕ, ಉಡುಪಿಯ ಪೂರ್ಣ ಪ್ರಜ್ಞ ಪದವಿ ಪೂರ್ವ ಕಾಲೇಜಿನ ಭವ್ಯ ನಾಯಕ್ 597 ಅಂಕ, ಉಡುಪಿಯ ವಿದ್ಯೋದಯ ಪದವಿ ಪೂರ್ವ ಕಾಲೇಜಿ‌ನ ಓಂಕಾರ್ ಪ್ರಭು 596 ಅಂಕ, ಕಾರ್ಕಳದ ಭುವನೇಂದ್ರ ಕಾಲೇಜಿನ ಅದ್ವೈತ್ ಶರ್ಮ 596 ಅಂಕ ಗಳಿಸಿದ್ದಾರೆ.

ಕಲಾ ವಿಭಾಗದಲ್ಲಿ ಈ ಬಾರಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಯಾವುದೇ ವಿದ್ಯಾರ್ಥಿ ಟಾಪ್ 10 ಲಿಸ್ಟ್ ನಲ್ಲಿ ಸ್ಥಾನ ಗಳಿಸಿಲ್ಲ.

- Advertisement -

Latest News

error: Content is protected !!