Friday, June 26, 2026
Homeಕರಾವಳಿಸುಬ್ರಮಣ್ಯದಲ್ಲಿ ವಿದ್ಯಾರ್ಥಿಗಳ ಮೇಲೆ ಹರಿದ ಕಾರು; ಮೂವರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

ಸುಬ್ರಮಣ್ಯದಲ್ಲಿ ವಿದ್ಯಾರ್ಥಿಗಳ ಮೇಲೆ ಹರಿದ ಕಾರು; ಮೂವರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

- Advertisement -
- Advertisement -

ಸುಬ್ರಮಣ್ಯ: ವಿದ್ಯಾರ್ಥಿಗಳ ಮೇಲೆ ಕಾರು ಹರಿದು ಮೂವರು ವಿದ್ಯಾರ್ಥಿನಿಯರು ಗಂಭೀರ ಗಾಯಗೊಂಡ ಇಂದು ಸಂಜೆ ಸುಬ್ರಮಣ್ಯದಲ್ಲಿ ನಡೆದಿದೆ,

ಶ್ರೀ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ 7 ರಿಂಜ 8 ವಿದ್ಯಾರ್ಥಿಗಳು ಇಂದು ಸಂಜೆ ಕಾಲೇಜು ಬಿಟ್ಟು ಮನೆಗೆ ತೆರಳುತ್ತಿದ್ದರು. ವಿದ್ಯಾರ್ಥಿಗಳು ವಲ್ಲೀಶ ಸಭಾಭವನದ ಎದುರಿನಿಂದ ಸುಬ್ರಹ್ಮಣ್ಯ ಪೇಟೆ ಕಡೆ ತೆರಳುತ್ತಿದ್ದಾಗ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ.. ಪರಿಣಾಮ ಮೂವರು ವಿದ್ಯಾರ್ಥಿನಿಯರು ಗಂಭೀರ ಗಾಯಗೊಂಡಿದ್ದಾರೆ. ಅವರಿಗೆ ಸುಬ್ರಹ್ಮಣ್ಯದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಪುತ್ತೂರಿಗೆ ಕರೆದೊಯ್ಯಲಾಗಿದೆ. ಇನ್ನೂ 3-4 ವಿದ್ಯಾರ್ಥಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿದೆ ಎನ್ನಲಾಗಿದೆ.

- Advertisement -

Latest News

error: Content is protected !!