Saturday, June 6, 2026
Homeಕರಾವಳಿಉಡುಪಿಉಡುಪಿಯಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಆತ್ಮಹತ್ಯೆಗೆ ಶರಣು

ಉಡುಪಿಯಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಆತ್ಮಹತ್ಯೆಗೆ ಶರಣು

- Advertisement -
- Advertisement -

ಉಡುಪಿ: ನಿನ್ನೆ ಒಂದೇ ದಿನ ಉಡುಪಿಯಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನದ ಬಳಿ ನಿವಾಸಿ, ನಿವೃತ್ತ ಶಿಕ್ಷಕಿ ಕೆ.ಶಾರದಾ (73) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ನಿನ್ನೆ ಬೆಳಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ವಿದೇಶದಿಂದ ಊರಿಗೆ ಬಂದ ಬಳಿಕ ವಾಪಾಸು ಹೋಗುವ ವೇದನೆ ಯಿಂದ ಮನನೊಂದ ರಿಚರ್ಡ್ ಡಿಸೋಜ(55) ಎಂಬವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅತ್ತ  ವೈಯಕ್ತಿಕ ಕಾರಣದಿಂದ ಮನನೊಂದ ಕಂಡ್ಲೂರು ಜೆಎಂ ರೋಡ್ ಹಳೆಯ ಮನೆ ಜುಮ್ಮಾ ಮಸೀದಿ ಹಿಂಭಾಗ ನಿವಾಸಿ ರಫೀಕ್(32) ಎಂಬವರು ನಿನ್ನೆ ಬೆಳಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!