Thursday, June 25, 2026
Homeತಾಜಾ ಸುದ್ದಿಜಮ್ಮು-ಕಾಶ್ಮೀರ ಎನ್‌ಕೌಂಟರ್‌: 3 ಎಲ್‌ಇಟಿ ಉಗ್ರರನ್ನು ಸದೆಬಡಿದ ಸೇನಾಪಡೆ, ಓರ್ವ ಪೊಲೀಸ್‌ ಹುತಾತ್ಮ

ಜಮ್ಮು-ಕಾಶ್ಮೀರ ಎನ್‌ಕೌಂಟರ್‌: 3 ಎಲ್‌ಇಟಿ ಉಗ್ರರನ್ನು ಸದೆಬಡಿದ ಸೇನಾಪಡೆ, ಓರ್ವ ಪೊಲೀಸ್‌ ಹುತಾತ್ಮ

- Advertisement -
- Advertisement -

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ ಮತ್ತು ಬಡ್ಗಾಮ್ ಜಿಲ್ಲೆಗಳಲ್ಲಿ ಉಗ್ರರು ಮತ್ತು ಭದ್ರತಾ ಪಡೆ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಹತರಾಗಿದ್ದು, ಪೊಲೀಸರೊಬ್ಬರು ಹುತಾತ್ಮರಾಗಿದ್ದಾರೆ.

ಓರ್ವ ಪೊಲೀಸ್‌ ಹುತಾತ್ಮ
ಜಮ್ಮು-ಕಾಶ್ಮೀರದ ಬದ್ಗಾಮ್ ಜಿಲ್ಲೆಯಲ್ಲಿ ಶುಕ್ರವಾರ ನಸುಕಿನ ಜಾವ ನಡೆದ ಎನ್ ಕೌಂಟರ್ ನಲ್ಲಿ ಪೊಲೀಸರೊಬ್ಬರು ಹುತಾತ್ಮರಾಗಿದ್ದು ಮತ್ತೊಬ್ಬ ಪೊಲೀಸ್ ಗೆ ಗಾಯವಾಗಿದೆ. ಉಗ್ರರು ಅವಿತು ಕುಳಿತಿದ್ದಾರೆ ಎಂಬ ನಿಖರ ಮಾಹಿತಿ ಪಡೆದ ಪೊಲೀಸರು ಜಿಲ್ಲೆಯ ಬೀರ್ವ ಪ್ರದೇಶದ ಝನಿಗಮ್ ಗ್ರಾಮವನ್ನು ಸುತ್ತುವರಿದು ಶೋಧ ಕಾರ್ಯ ಆರಂಭಿಸಿದರು. ಪೊಲೀಸರು ಹುಡುಕಾಟ ನಡೆಸುತ್ತಿರುವಾಗ ಉಗ್ರರು ಗುಂಡಿನ ಮಳೆಗೈಯಲಾರಂಭಿಸಿದರು. ಈ ಸಂದರ್ಭದಲ್ಲಿ ಎನ್ ಕೌಂಟರ್ ಏರ್ಪಟ್ಟು ಗುಂಡಿನ ಚಕಮಕಿಯಲ್ಲಿ ಇಬ್ಬರು ಪೊಲೀಸರಿಗೆ ತೀವ್ರ ಗಾಯಗಳಾದವು. ತಕ್ಷಣವೇ ಇಬ್ಬರನ್ನೂ ಆಸ್ಪತ್ರೆಗೆ ಸೇರಿಸಲಾಯಿತಾದರೂ ಒಬ್ಬರು ಚಿಕಿತ್ಸೆ ಫಲಕಾರಿಯಾಗದೆ ಹುತಾತ್ಮಗೊಂಡಿದ್ದಾರೆ.

ಮೂವರು ಉಗ್ರರನ್ನು ಸಾಡೆ ಬಡಿದ ಸೇನೆ
ದಕ್ಷಿಣ ಕಾಶ್ಮೀರದ ಶೋಪಿಯಾನ್ ನಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಅಡಗಿಕುಳಿತಿದ್ದ ಲಷ್ಕರ್-ಇ-ತೊಯ್ಬಾ ಸಂಘಟನೆಯ ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆಂದು ವರದಿಗಳು ತಿಳಿಸಿವೆ. ಉಗ್ರರು ಅಡಗಿಕುಳಿತಿರುವ ಮಾಹಿತಿ ತಿಳಿದುಬರುತ್ತಿದ್ದಂತೆಯೇ ಭಾರತೀಯ ಸೇನೆ ಹಾಗೂ ಕಾಶ್ಮೀರ ಪೊಲೀಸ್ ಜಂಟಿ ಕಾರ್ಯಚರಣೆ ನಡೆಸಿತು. ಕಾರ್ಯಾಚರಣೆ ಆರಂಭವಾಗುತ್ತಿದ್ದಂತೆಯೇ ಅಡಗಿ ಕುಳಿತಿದ್ದ ಉಗ್ರರು ಸೇನೆ ಹಾಗೂ ಪೊಲೀಸರ ಮೇಲೆ ಗುಂಡಿನ ಸುರಿಮಳೆಗೈದಿದ್ದಾರೆ.

ತಕ್ಷಣ ಕಾರ್ಯಪ್ರವೃತ್ತರಾದ ಸೇನೆ ಹಾಗೂ ಪೊಲೀಸ್, ಪ್ರತ್ಯುತ್ತರ ನೀಡಿದೆ. ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರನ್ನು ಸೇನೆ ಹೊಡೆದುರುಳಿಸಿತು. ಹತ್ಯೆಯಾದ ಉಗ್ರರಿಂದ ಭದ್ರತಾಪಡೆಗಳು ಶಸ್ತ್ರಾಸ್ತ್ರಗಳು, ಸ್ಫೋಟಕ ಸಾಮಾಗ್ರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

- Advertisement -

Latest News

error: Content is protected !!