Friday, June 5, 2026
Homeಕರಾವಳಿಮಂಗಳೂರುಬಂಟ್ವಾಳ; ಮುಂದಕ್ಕೆ ಚಲಿಸಿದ ಮನೆ ಮುಂದೆ ನಿಲ್ಲಿಸಿದ್ದ ಟೆಂಪೋ; ಆಟವಾಡುತ್ತಿದ್ದ ಮೂರು ವರ್ಷದ ಮಗು ಸಾವು

ಬಂಟ್ವಾಳ; ಮುಂದಕ್ಕೆ ಚಲಿಸಿದ ಮನೆ ಮುಂದೆ ನಿಲ್ಲಿಸಿದ್ದ ಟೆಂಪೋ; ಆಟವಾಡುತ್ತಿದ್ದ ಮೂರು ವರ್ಷದ ಮಗು ಸಾವು

- Advertisement -
- Advertisement -

ಬಂಟ್ವಾಳ; ಮನೆ ಮುಂದೆ ನಿಲ್ಲಿಸಿದ್ದ ಟೆಂಪೋ ಮುಂದಕ್ಕೆ ಚಲಿಸಿದ ಪರಿಣಾಮ ಆಟವಾಡುತ್ತಿದ್ದ ಮೂರೂವರೆ ವರ್ಷದ ಮಗು ಸಾವನ್ನಪ್ಪಿರುವ ಘಟನೆ ಬಂಟ್ವಾಳದ ಲೊರೆಟ್ಟೊಪದವಿನಲ್ಲಿ ನಡೆದಿದೆ.ಫರಂಗಿಪೇಟೆ ಸಮೀಪದ 10ನೇ ಮೈಲಿಗಲ್ಲು ಉನೈಸ್ ಎಂಬವರ ಪುತ್ರಿ ಆಶಿಕ (3) ಮೃತ ಕಂದಮ್ಮ

ಆಶಿಕ ಮಗು ಲೊರೆಟ್ಟೋಪದವಿನ ತನ್ನ ಅಜ್ಜಿಯ ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದಾಗ ಅಂಗಳದಲ್ಲಿ ನಿಲ್ಲಿಸಿದ್ದ ಮಗುವಿನ ತಾಯಿಯ ಸಹೋದರನ ಟೆಂಪೋ ಏಕಾಏಕಿ ಮುಂದಕ್ಕೆ ಚಲಿಸಿದೆ. ನಿಲ್ಲಿಸಿದ್ದ ಟೆಂಪೋವಿನ ಗೇರ್ ಅನ್ನು ಮಕ್ಕಳು ಎಳೆದಿದ್ದು, ಈ ವೇಳೆ ಟೆಂಪೊ ಕೆಳಗೆ ಚಲಿಸಿ ಮನೆಯಂಗಳದಲ್ಲಿ ಆಟವಾಡುತ್ತಿದ್ದ ಮಗುವಿಗೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗುತ್ತಿದೆ. ಗಂಭೀರ ಗಾಯಗೊಂಡ ಮಗುವನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದರೂ ಯಾವುದೇ ಪ್ರಯೋಜನವಾಗಿಲ್ಲ. ಘಟನೆಯ ಕುರಿತು ಬಂಟ್ವಾಳ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

- Advertisement -

Latest News

error: Content is protected !!