Wednesday, June 3, 2026
Homeಕರಾವಳಿಮಂಗಳೂರು : ಲಂಚ ಪಡೆದ ಭೂಮಾಪಕನಿಗೆ 3 ವರ್ಷ 3 ತಿಂಗಳು ಜೈಲು ಶಿಕ್ಷೆ

ಮಂಗಳೂರು : ಲಂಚ ಪಡೆದ ಭೂಮಾಪಕನಿಗೆ 3 ವರ್ಷ 3 ತಿಂಗಳು ಜೈಲು ಶಿಕ್ಷೆ

- Advertisement -
- Advertisement -

ಮಂಗಳೂರು : ಜಮೀನಿನ ಅಳತೆ ಮಾಡಿ ನಕ್ಷೆ ತಯಾರಿಸಿಕೊಡಲು ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಲಂಚ ಪಡೆದ ಭೂಮಾಪಕನಿಗೆ 3 ವರ್ಷ 3 ತಿಂಗಳು ಜೈಲು ಶಿಕ್ಷೆ ಮತ್ತು 20 ಸಾವಿರ ರೂ. ದಂಡ ವಿಧಿಸಿ 3 ನೇ ಹೆಚ್ಚುವರಿ ಸತ್ರ ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದೆ.

ಪುತ್ತೂರು ಭೂಮಾಪನ ಇಲಾಖೆಯಲ್ಲಿ ಭೂಮಾಪಕನಾಗಿದ್ದ ಮಹಾದೇವ ನಾಯಕ್ ಶಿಕ್ಷೆಗೆ ಗುರಿಯಾಗಿದ್ದು, ದಂಡ ತೆರುವಲ್ಲಿ ವಿಫಲವಾದರೆ ಇನ್ನೂ ಹೆಚ್ಚುವರಿ ಮೂರು ತಿಂಗಳ ಶಿಕ್ಷೆ ಅನುಭವಿಸಬೇಕು ಎಂದು ನ್ಯಾಯಾಧೀಶರಾದ ಬಿ.ಬಿ.ಜಕಾತಿ ಅವರು ತೀರ್ಪು ನೀಡಿದ್ದಾರೆ.

ಜಮೀನಿನ ಅಳತೆ ಮಾಡಿ ನಕ್ಷೆ ತಯಾರಿಸಿಕೊಡಲು ಲಂಚ ಪಡೆದ ಕುರಿತು ಲೋಕಾಯುಕ್ತ ಪೊಲೀಸ್ ಠಾಣೆ ಮಂಗಳೂರಿನಲ್ಲಿ 2014 ರಲ್ಲಿ ಪ್ರಕರಣ ದಾಖಲಾಗಿತ್ತು.ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು.

- Advertisement -

Latest News

error: Content is protected !!