Friday, April 19, 2024
Homeತಾಜಾ ಸುದ್ದಿಮಂಗಳೂರು: ಮಸೂದ್‌ ಹಾಗೂ ಫಾಝಿಲ್‌ ಕುಟುಂಬಕ್ಕೆ 30 ಲಕ್ಷ ರೂ ಪರಿಹಾರ: ಪ್ರವೀಣ್‌ ಕುಟುಂಬಕ್ಕೂ ನೆರವು...

ಮಂಗಳೂರು: ಮಸೂದ್‌ ಹಾಗೂ ಫಾಝಿಲ್‌ ಕುಟುಂಬಕ್ಕೆ 30 ಲಕ್ಷ ರೂ ಪರಿಹಾರ: ಪ್ರವೀಣ್‌ ಕುಟುಂಬಕ್ಕೂ ನೆರವು ನೀಡಲು ಮುಸ್ಲಿಂ ಕಮಿಟಿ ನಿರ್ಧಾರ

spot_img
- Advertisement -
- Advertisement -

ಮಂಗಳೂರು: ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ಫಾಝಿಲ್‌ ಹಾಗೂ ಮಸೂದ್‌ ಕುಟುಂಬಕ್ಕೆ ಮುಸ್ಲಿಂ ಸೆಂಟ್ರಲ್ ಕಮಿಟಿಯಿಂದ 30 ಲಕ್ಷ ರೂ ಪರಿಹಾರದ ಚೆಕ್‌ ವಿತರಿಸಿದೆ.

ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಹಾಜಿ ಕೆ ಎಸ್. ಮುಹಮ್ಮದ್ ಮಸೂದ್ ನೇತೃತ್ವದಲ್ಲಿ ಚೆಕ್ ವಿತರಿಸಲಾಯಿತು.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಹಾಜಿ ಕೆ. ಎಸ್. ಮುಹಮ್ಮದ್ ಮಸೂದ್, ಪ್ರವೀಣ್ ಕುಟುಂಬಕ್ಕೂ ಪರಿಹಾರ ನೀಡಲು ನಿರ್ಧರಿಸಲಾಗಿದ್ದು, ಕುಟುಂಬಸ್ಥರೊಂದಿಗೆ ಈ ಬಗ್ಗೆ ಮಾತುಕತೆ ನಡೆಸಲಾಗಿತ್ತು. ಸದ್ಯದ ಪರಿಸ್ಥಿತಿ ಹಿನ್ನೆಲೆ ಕುಟುಂಬಸ್ಥರು ಭೇಟಿ ನಿರಾಕರಿಸಿದ್ದರಿಂದ ಮುಂದಿನ ದಿನಗಳಲ್ಲಿ ಪ್ರವೀಣ್ ಕುಟುಂಬಕ್ಕೂ ಪರಿಹಾರ ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು.

- Advertisement -
spot_img

Latest News

error: Content is protected !!