ಬೆಂಗಳೂರು: ಕೊರೋನಾ ಸಾಂಕ್ರಾಮಿಕ ರೋಗ ತಡೆ ಕಾರ್ಯದಲ್ಲಿ ತೊಡಗಿಕೊಂಡಿರುವ ಕೊರೋನಾ ವಾರಿಯರ್ಸ್ ಮೃತಪಟ್ಟರೆ ಸರ್ಕಾರದಿಂದ 30 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು.
ರಾಜ್ಯ ಆರ್ಥಿಕ ಇಲಾಖೆ ಕೋರೋನಾ ಸಾಂಕ್ರಾಮಿಕ ರೋಗ ನಿಯಂತ್ರಣದಲ್ಲಿ ತೊಡಗಿರುವ ಅಂಗನವಾಡಿ ಕಾರ್ಯಕರ್ತೆಯರು, ಪೌರಕಾರ್ಮಿಕರು, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಸೋಂಕಿನಿಂದ ಮೃತಪಟ್ಟರೆ 30 ಲಕ್ಷ ರೂಪಾಯಿ ಪರಿಹಾರ ನೀಡಲು ಅನುಮೋದನೆ ನೀಡಿದೆ. ಕಾಲಮಿತಿಯೊಳಗೆ ಪರಿಹಾರ ವಿತರಿಸಲು ಆದೇಶ ನೀಡಲಾಗಿದೆ.
ಸಾಂಕ್ರಮಿಕ ರೋಗ ತಡೆಗಟ್ಟುವ ಕಾರ್ಯದಲ್ಲಿ ತೊಡಗಿರುವ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಗೃಹರಕ್ಷಕ ದಳದ ಸಿಬ್ಬಂದಿ, ಪೌರ ರಕ್ಷಣಾ ದಳ ಸಿಬ್ಬಂದಿ, ಅಗ್ನಿಶಾಮಕದಳ, ಪೌರಕಾರ್ಮಿಕರು, ಸ್ವಚ್ಛತಾ ಕಾರ್ಮಿಕರು, ವಾಹನಗಳ ಚಾಲಕರು ಕೊರೋನಾ ಸೋಂಕಿನಿಂದ ಮೃತಪಟ್ಟರೆ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ಮಾರ್ಗಸೂಚಿ ಅನ್ವಯ 30 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಹೇಳಲಾಗಿದೆ.