Thursday, June 4, 2026
Homeಕರಾವಳಿಧರ್ಮಸ್ಥಳ: ಜ್ಞಾನದೀಪ ಶಿಕ್ಷಣ ಕಾರ್ಯಕ್ರಮದಡಿಯಲ್ಲಿ ಶಾಲೆಗಳಿಗೆ ಪೀಠೋಪಕರಣ ವಿತರಣಾ ಕಾರ್ಯಕ್ರಮ; ರಾಜ್ಯದ ಶಿಕ್ಷಣ ಸಚಿವರಿಂದ ಕಾರ್ಯಕ್ರಮಕ್ಕೆ...

ಧರ್ಮಸ್ಥಳ: ಜ್ಞಾನದೀಪ ಶಿಕ್ಷಣ ಕಾರ್ಯಕ್ರಮದಡಿಯಲ್ಲಿ ಶಾಲೆಗಳಿಗೆ ಪೀಠೋಪಕರಣ ವಿತರಣಾ ಕಾರ್ಯಕ್ರಮ; ರಾಜ್ಯದ ಶಿಕ್ಷಣ ಸಚಿವರಿಂದ ಕಾರ್ಯಕ್ರಮಕ್ಕೆ ಚಾಲನೆ!

- Advertisement -
- Advertisement -

ಧರ್ಮಸ್ಥಳ: 311 ಶಾಲೆಗಳಿಗೆ ರೂ.1.87,23000- ಮೌಲ್ಯದ ಸುಮಾರು 2370 ಜೊತೆ ಡೆಸ್ಕ್ ಬೆಂಚುಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಜ್ಞಾನದೀಪ ಶಿಕ್ಷಣ ಕಾರ್ಯಕ್ರಮದಡಿಯಲ್ಲಿ ರಾಜ್ಯದ ಹಾವೇರಿ, ಬೆಳಗಾವಿ ಮತ್ತು ಉತ್ತರ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಿಗೆ ವಿತರಿಸುವ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಯಿತು.

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ರಾಜ್ಯ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ರವರು 311 ಶಾಲೆಗಳಿಗೆ ಪೀಠೋಪಕರಣಗಳನ್ನು ಸಾಗಿಸುವ ವಾಹನಕ್ಕೆ ಹಸಿರು ನಿಶಾನೆ ತೋರಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಲ್.ಎಚ್.ಮಂಜುನಾಥ್‌, ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್, ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ, ಯೋಜನಾಧಿಕಾರಿ ಪುಷ್ಪರಾಜ್, ಉಜಿರೆ ಲಕ್ಷ್ಮೀ ಗ್ರೂಪ್ಸ್ ಮಾಲಕ ಮೋಹನ್ ಕುಮಾರ್, ತಹಶೀಲ್ದಾರ್ ಮಹೇಶ್ ಜೆ, ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಎಸ್, ವಿರೂಪಾಕ್ಷಪ್ಪ ಮೊದಲಾದ ಪ್ರಮುಖರು ಉಪಸ್ಥಿತರಿದ್ದರು.

- Advertisement -

Latest News

error: Content is protected !!