Monday, June 8, 2026
Homeಕರಾವಳಿಅಕ್ರಮವಾಗಿ ಸಾಗಿಸುತ್ತಿದ್ದ 32.96 ಲಕ್ಷ ರೂ ಮೌಲ್ಯದ ಚಿನ್ನವಶ-ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಿಂಚಿನ ಕಾರ್ಯಾಚರಣೆ

ಅಕ್ರಮವಾಗಿ ಸಾಗಿಸುತ್ತಿದ್ದ 32.96 ಲಕ್ಷ ರೂ ಮೌಲ್ಯದ ಚಿನ್ನವಶ-ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಿಂಚಿನ ಕಾರ್ಯಾಚರಣೆ

- Advertisement -
- Advertisement -

ಮಂಗಳೂರು: ಇಲ್ಲಿನ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬ ಅಕ್ರಮವಾಗಿ ಸಾಗಿಸುತ್ತಿದ್ದ 32.96 ಲಕ್ಷ ರೂ ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ದುಬೈನಿಂದ ಮಂಗಳೂರಿಗೆ ಸ್ಪೈಸ್​ ಜೆಟ್ ವಿಮಾನದಲ್ಲಿ ಬಂದ ಪ್ರಯಾಣಿಕ ಅಕ್ರಮವಾಗಿ ಚಿನ್ನ ಸಾಗಾಟ ನಡೆಸುತ್ತಿದ್ದ.

ಈತ ದಕ್ಷಿಣ ಕನ್ನಡ ಜಿಲ್ಲೆಯ ಅಬೂಬಕ್ಕರ್ ಸಿದ್ದಿಕ್ ಎಂಬಾತ ಚಿನ್ನವನ್ನು ಪೌಡರ್ ರೂಪದಲ್ಲಿ ಅಡಗಿಸಿಟ್ಟುಕೊಂಡು ಬಂದಿದ್ದಾನೆ ಎಂದು ವರದಿಯಾಗಿದೆ. ಬಂಧಿತನಿಂದ ರೂಪಾಯಿ 32,96,800 ಮೌಲ್ಯದ 24 ಕ್ಯಾರೆಟ್ ಶುದ್ಧತೆಯ 634 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

Latest News

error: Content is protected !!