Thursday, June 4, 2026
Homeತಾಜಾ ಸುದ್ದಿಶಾಕಿಂಗ್ : SSLC ಪರೀಕ್ಷೆ ಬರೆದ 32 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್!

ಶಾಕಿಂಗ್ : SSLC ಪರೀಕ್ಷೆ ಬರೆದ 32 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್!

- Advertisement -
- Advertisement -

ಬೆಂಗಳೂರು : ರಾಜ್ಯಾದ್ಯಂತ ಎಸ್‌ಎಸ್‌ಎಲ್ ಸಿ ಪರೀಕ್ಷೆ ಆರಂಭವಾಗಿದ್ದು, ಈವರೆಗೆ ಪರೀಕ್ಷೆ ಬರೆದ 32 ವಿದ್ಯಾರ್ಥಿಗಳಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಭೀತಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಂಟೈನ್ಮೆಂಟ್ ಪ್ರದೇಶಗಳ 3 ಸಾವಿರದ 363 ವಿದ್ಯಾರ್ಥಿಗಳು ಮತ್ತು 613 ಕೋವಿಡ್ ಲಕ್ಷಣವಿರುವ ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿ ಪರೀಕ್ಷೆ ಬರೆಸಲಾಗಿದೆ.

ಇನ್ನು ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ 31 ಪರೀಕ್ಷಾ ಕೇಂದ್ರಗಳನ್ನು ಕಂಟೈನ್ಮೆಂಟ್ ಪ್ರದೇಶಗಳಿಂದ ತೆರವುಗೊಳಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

- Advertisement -

Latest News

error: Content is protected !!