Thursday, June 4, 2026
Homeಉತ್ತರ ಕನ್ನಡಭಟ್ಕಳದಲ್ಲಿ ಬೆಚ್ಚಿ ಬೀಳಿಸುವ ಪ್ರಕರಣ; ನಾಲ್ವರನ್ನು ಕತ್ತಿಯಿಂದ ಕಡಿದು ಭೀಕರ ಕೊಲೆ

ಭಟ್ಕಳದಲ್ಲಿ ಬೆಚ್ಚಿ ಬೀಳಿಸುವ ಪ್ರಕರಣ; ನಾಲ್ವರನ್ನು ಕತ್ತಿಯಿಂದ ಕಡಿದು ಭೀಕರ ಕೊಲೆ

- Advertisement -
- Advertisement -

ಉತ್ತರಕನ್ನಡ ; ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ  ಒಂದೇ ಕುಟುಂಬದ ನಾಲ್ವರನ್ನು ಕತ್ತಿಯಿಂದ ಕಡಿದು ಕೊಲೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಾಡವಳ್ಳಿ ಗ್ರಾಮದ ಸಮೀಪ ನಡೆದಿದೆ.

ಕೊಲೆಯಾದವರನ್ನು ಶಂಭು ಭಟ್ (65) ಆತನ ಪತ್ನಿ ಮಾದೇವಿ ಭಟ್, ಮಗ ರಾಜೀವ್ ಭಟ್ (34) ಹಾಗೂ ಮಗನ ಪತ್ನಿ ಕುಸುಮಾ ಭಟ್ (30) ಕೊಲೆಯಾದವರು. ಆಸ್ತಿ ವಿಚಾರಕ್ಕಾಗಿ ಈ ಕೊಲೆ ನಡೆದಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!