- Advertisement -
- Advertisement -
ಬೆಂಗಳೂರು ನಗರವನ್ನು ಈಗಾಗಲೇ ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ ಕೊರೋನಾ ಹಾಟ್’ಸ್ಪಾಟ್ ಎಂದು ಘೋಷಣೆ ಮಾಡಿದ ಬೆನ್ನಲ್ಲೇ ರಾಜ್ಯ ಸರ್ಕಾರ ನಾಲ್ಕು ಜಿಲ್ಲೆಗಳನ್ನು ರೆಡ್ ಝೋನ್ ಎಂದು ಘೋಷಣೆ ಮಾಡಿದೆ. ಮೈಸೂರು, ಉತ್ತರ ಕನ್ನಡ, ಬೆಂಗಳೂರು, ದಕ್ಷಿಣ ಕನ್ನಡ ಹಾಗೂ ಚಿಕ್ಕಬಳ್ಳಾಪುರಗಳನ್ನು ರಾಜ್ಯ ಸರ್ಕಾರ ರೆಡ್ ಝೋನ್ ಎಂದು ಘೋಷಣೆ ಮಾಡಿದೆ.
ಕೊರೋನಾ ನಿಯಂತ್ರಣಕ್ಕೆ ತಡೆಯುವ ಸಲುವಾಗಿ ಕೆಲ ಗ್ರಾಮ ಪ್ರದೇಶಗಳನ್ನು ಬಫರ್ ಜೋನ್ ಎಂದೂ ಕೂಡ ಕರೆಯಲಾಗುತ್ತಿದೆ. ರೆಡ್ ಝೋನ್ ಘೋಷಣೆಯಾಗಿರುವ ನಗರ ಹಾಗ ಜಿಲ್ಲೆಗಳ ಮೇಲೆ ಹೆಚ್ಚಿನ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಮನೆಗಳ ಬಾಗಿಲಿಗೆ ತೆರಳಿ ಕೊರೋನಾ ಜಾಗೃತಿ ಮೂಡಿಸುವುದಷ್ಟೇ ಅಲ್ಲ, ಕ್ವಾರಂಟೈನ್ ನಲ್ಲಿರುವ ಜನರ ಸಂಪರ್ಕದಲ್ಲಿರುವವರ ಮೇಲೂ ಹೆಚ್ಚಿನ ನಿಗಾ ವಹಿಸಲಾಗುತ್ತದೆ. ಈ ಜಿಲ್ಲೆಗಳಲ್ಲಿ ಘೋಷಣೆ ಮಾಡಲಾಗಿರುವ ಲಾಕ್’ಡೌನ್ ಕ್ರಮವನ್ನು ಮತ್ತಷ್ಟು ಬಿಗಿಗೊಳಿಸಲಾಗುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಹೇಳಿದ್ದಾರೆ.
- Advertisement -