Thursday, June 4, 2026
Homeಕರಾವಳಿಕಡಬ: ಕೋಡಿಂಬಾಳದಲ್ಲಿ ಆಟೋ ರಿಕ್ಷಾ ಹಾಗೂ ಪಿಕಪ್ ನಡುವೆ ಅಪಘಾತ: ನಾಲ್ಕು ವರ್ಷದ ಕಂದಮ್ಮ ಬಲಿ

ಕಡಬ: ಕೋಡಿಂಬಾಳದಲ್ಲಿ ಆಟೋ ರಿಕ್ಷಾ ಹಾಗೂ ಪಿಕಪ್ ನಡುವೆ ಅಪಘಾತ: ನಾಲ್ಕು ವರ್ಷದ ಕಂದಮ್ಮ ಬಲಿ

- Advertisement -
- Advertisement -

ಕಡಬ:  ಆಟೋ ರಿಕ್ಷಾ ಹಾಗೂ ಪಿಕಪ್ ನಡುವೆ ಅಪಘಾತ ಸಂಭವಿಸಿ ನಾಲ್ಕು ವರ್ಷದ ಕಂದಮ್ಮ ಬಲಿಯಾಗಿರುವ ಘಟನೆ ಕಡಬ – ಪಂಜ ರಸ್ತೆಯ ಕೋಡಿಂಬಾಳ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ.

ಕಡಬದಿಂದ ಕೋಡಿಂಬಾಳ ಕಡೆಗೆ ತೆರಳುತ್ತಿದ್ದ ರಿಕ್ಷಾ ಹಾಗೂ ಪಿಕಪ್ ನಡುವೆ ಕೋಡಿಂಬಾಳ ಸಮೀಪ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ನವೀನ್ ಎಂಬವರ ಪುತ್ರ ಹಾರ್ದಿಕ್ (4) ಗಂಭೀರ ಗಾಯಗೊಂಡಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ 108 ಆಂಬ್ಯುಲೆನ್ಸ್ ಮೂಲಕ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಆದರೆ ಗಂಭೀರ  ಗಾಯಗಳಾದ ಕಾರಣ ಹಾದಿ ಮಧ್ಯೆ ಮಗು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!