Thursday, June 4, 2026
Homeತಾಜಾ ಸುದ್ದಿಮಹಾರಾಷ್ಟ್ರದಲ್ಲಿ ಒಂದೇ ದಿನ 4841 ಹೊಸ ಪ್ರಕರಣ ಪತ್ತೆ: 1.5 ಲಕ್ಷದತ್ತ ಕೊರೋನಾ ಸೋಂಕಿತರ ಸಂಖ್ಯೆ

ಮಹಾರಾಷ್ಟ್ರದಲ್ಲಿ ಒಂದೇ ದಿನ 4841 ಹೊಸ ಪ್ರಕರಣ ಪತ್ತೆ: 1.5 ಲಕ್ಷದತ್ತ ಕೊರೋನಾ ಸೋಂಕಿತರ ಸಂಖ್ಯೆ

- Advertisement -
- Advertisement -

ಮುಂಬೈ: ಭಾರತದಲ್ಲಿ ಕೊರೋನಾ ವೈರಸ್ ಹಾಟ್ ಸ್ಪಾಟ್ ರಾಜ್ಯ ಎಂದೇ ಕುಖ್ಯಾತಿ ಪಡೆದಿರುವ ಮಹಾರಾಷ್ಟ್ರದಲ್ಲಿ ಶುಕ್ರವಾರ ಒಂದೇ ದಿನ 4841 ಹೊಸ ಪ್ರಕರಣ ಪತ್ತೆಯಾಗಿದೆ.

ಮಹಾರಾಷ್ಟ್ರದಲ್ಲಿ ಸದ್ಯ ಕೊರೋನಾ ಸೋಂಕಿತರ ಸಂಖ್ಯೆ 1, 47, 741 ಇದ್ದು, 4841 ಹೊಸ ಕೇಸುಗಳು ಪತ್ತೆಯಾಗಿವೆ, ಇದುವರೆಗೆ ರಾಜ್ಯದಲ್ಲಿ 6, 931 ಮಂದಿ ಕೊರೋನಾಕ್ಕೆ ಬಲಿಯಾಗಿದ್ದು 77,453 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಸದ್ಯ ರಾಜ್ಯದಲ್ಲಿ 63, 342 ಸಕ್ರಿಯ ಕೇಸುಗಳಿವೆ. ಇದುವರೆಗೆ ರಾಜ್ಯದಲ್ಲಿ 8, 48, 026 ಮಂದಿಗೆ ಕೊರೋನಾ ಪರೀಕ್ಷೆ ಮಾಡಿಸಲಾಗಿದೆ.

ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿದ್ದರೂ ಸಹ ಸರ್ಕಾರ ಕ್ಷೌರದಂಗಡಿ, ಸಲೂನ್ ಮತ್ತು ಬ್ಯೂಟಿ ಪಾರ್ಲರ್ ಗಳನ್ನು ಭಾನುವಾರದಿಂದ ತೆರೆಯಲು ಅನುಮತಿ ನೀಡಿದೆ. ಆದರೆ ಮೊದಲೇ ಬುಕ್ಕಿಂಗ್ ಹೋಗುವಂತೆ ಗ್ರಾಹಕರಿಗೆ ತಿಳಿಸಲಾಗಿದೆ.

- Advertisement -

Latest News

error: Content is protected !!