Wednesday, June 3, 2026
Homeಕರಾವಳಿಮಂಗಳೂರುಮಂಗಳೂರು: ಶಾಲಾ ಮಕ್ಕಳನ್ನು ಕರೆದೊಯ್ಯುವ ರಿಕ್ಷಾ ಮತ್ತು ಪಿಕಪ್‌ ನಡುವೆ ಅಪಘಾತ; ನಾಲ್ಕನೇ ತರಗತಿ ಬಾಲಕಿ...

ಮಂಗಳೂರು: ಶಾಲಾ ಮಕ್ಕಳನ್ನು ಕರೆದೊಯ್ಯುವ ರಿಕ್ಷಾ ಮತ್ತು ಪಿಕಪ್‌ ನಡುವೆ ಅಪಘಾತ; ನಾಲ್ಕನೇ ತರಗತಿ ಬಾಲಕಿ ಸಾವು

- Advertisement -
- Advertisement -

ಮಂಗಳೂರು: ಶಾಲಾ ಮಕ್ಕಳನ್ನು ಕರೆದೊಯ್ಯುವ ರಿಕ್ಷಾ ಮತ್ತು ಪಿಕಪ್‌ ನಡುವೆ ಅಪಘಾತ ಸಂಭವಿಸಿ ನಾಲ್ಕನೇ ತರಗತಿ ಬಾಲಕಿ ಸಾವನ್ನಪ್ಪಿರುವ ಘಟನೆ ಬೆಳ್ಮ ಗ್ರಾಮದ ಕಲ್ಪಾದೆ ಎಂಬಲ್ಲಿ ಗುರುವಾರ ನಡೆದಿದೆ.

ಬಡಕಬೈಲು ನಿವಾಸಿ ಮಹಮ್ಮದ್‌ ಬಿ ಮೋನು ಮತ್ತು ಮುನ್ಝಿಯಾ ದಂಪತಿ ಪುತ್ರಿ ಆಯಿಷಾ ವಹಿಬಾ (11 ) ಮೃತ ವಿದ್ಯಾರ್ಥಿನಿ.ಮದಕ ಭಾಗದಿಂದ ದೇರಳಕಟ್ಟೆ ನೇತಾಜಿ ಶಾಲೆಗೆ ಮಕ್ಕಳನ್ನು ಕರೆತರುವ ಆಟೋ ರಿಕ್ಷಾಗೆ ಕಲ್ಪಾದೆ ತಲುಪುತ್ತಿದ್ದಂತೆ ಎದುರಿನಿಂದ ಅತಿ ವೇಗ ದಿಂದ ಬಂದ ಪಿಕಪ್‌ ವಾಹನ ಢಿಕ್ಕಿ ಹೊಡೆದಿದೆ.

ಪರಿಣಾಮ ರಿಕ್ಷಾ ಪಲ್ಟಿಯಾಗಿ ಆಯಿಷಾ ವಹಿಬಾ ಗಂಭೀರವಾಗಿ ಗಾಯಗೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಮೃತಪಟ್ಟಿದ್ದಾಳೆ.

ರಿಕ್ಷಾದಲ್ಲಿದ್ದ ಇತರ ಮೂವರು ವಿದ್ಯಾರ್ಥಿಗಳು ಅಲ್ಪಸ್ವಲ್ಪ ಗಾಯಗೊಂಡಿದ್ದಾರೆ. ರಿಕ್ಷಾ ಚಾಲಕನಿಗೂ ಗಾಯವಾಗಿದೆ. ಗಾಯಾಳುಗಳನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ವಿದ್ಯಾರ್ಥಿನಿ ಅಪಘಾತದಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ದೇರಳಕಟ್ಟೆ ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ರಜೆ ನೀಡಲಾಗಿದೆ.

- Advertisement -

Latest News

error: Content is protected !!