Saturday, June 6, 2026
Homeಕರಾವಳಿಉಡುಪಿಉಡುಪಿ: ಶಿರೂರು ಮಠದ ಶ್ರೀಲಕ್ಷ್ಮೀವರತೀರ್ಥರ 4 ನೇ ವರ್ಷದ ಆರಾಧನೆ

ಉಡುಪಿ: ಶಿರೂರು ಮಠದ ಶ್ರೀಲಕ್ಷ್ಮೀವರತೀರ್ಥರ 4 ನೇ ವರ್ಷದ ಆರಾಧನೆ

- Advertisement -
- Advertisement -

ಉಡುಪಿ: ಶ್ರೀಲಕ್ಷ್ಮೀವರತೀರ್ಥ ಶ್ರೀಪಾದರ 4 ನೇ ವರ್ಷದ ಆರಾಧನಾ ಮಹೋತ್ಸವವು ಉಡುಪಿ ರಥಬೀದಿಯಲ್ಲಿರುವ ನಂಜನಗೂಡು ಶ್ರೀರಾಘವೇಂದ್ರ ಮಠದಲ್ಲಿ ಶಾಸ್ತ್ರೋಕ್ತವಾಗಿ ವೈಭವದಿಂದ ಜರಗಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಅನೇಕ ಮಂದಿ ಭಾಗವಹಿಸಿ ಪ್ರಸಾದ ಸ್ವೀಕರಿಸಿದರು.

ಮುಂಜಾನೆ  ಶ್ರೀಲಕ್ಷ್ಮೀವರತೀರ್ಥ ಶ್ರೀಪಾದರ  ಪೂರ್ವಾಶ್ರಮದ ಕುಟುಂಬಿಕರು ಹಾಗೂ ಭಕ್ತವೃಂದದ ವತಿಯಿಂದ ಶ್ರೀರಾಘವೇಂದ್ರಗುರುಸಾರ್ವಭೌಮರಿಗೆ ವಿಶೇಷ ಪೂಜೆಗಳನ್ನು ಸಲ್ಲಿಸಲಾಯಿತು. ವೇದಮೂರ್ತಿ ಶ್ರೀಸುಬ್ರಹ್ಮಣ್ಯ ಆಚಾರ್ಯ ಮತ್ತು ಬಳಗದವರಿಂದ ಪವಮಾನ ಕಲಶಾಭಿಷೇಕ ಹೋಮ ಹಾಗೂ ವಿರಜಾ ಹೋಮ ಜರಗಿತು.

ಶ್ರೀಲಕ್ಷ್ಮೀವರತೀರ್ಥಶ್ರೀಪಾದರ ಮೃತ್ತಿಕಾ ವೃಂದಾವನಕ್ಕೆ ಶ್ರೀಕೃಷ್ಣಮುಖ್ಯ ಪ್ರಾಣದೇವರ ಹಾಗೂ ಶ್ರೀ ರಾಘವೇಂದ್ರಗುರುಗಳ ತೀರ್ಥ,ಪಂಚಾಮೃತ ಗಳಿಂದ ಅಭಿಷೇಕ ನಡೆಸಿ ನಂತರ ವಿಶೇಷ ಅಲಂಕಾರ ಪೂಜೆ ಹಾಗೂ ಮಹಾಮಂಗಳಾರತಿ ಬೆಳಗಿಸಲಾಯಿತು.

- Advertisement -

Latest News

error: Content is protected !!