Wednesday, June 3, 2026
Homeಕರಾವಳಿಉಡುಪಿಉಡುಪಿ: ಹೆಜಮಾಡಿ ಕೋಡಿ ಬಂದರು ಪ್ರದೇಶದಲ್ಲಿದ್ದ ಕಬ್ಬಿಣದ ವಸ್ತುಗಳ ಕಳ್ಳತನ ಪ್ರಕರಣ; ಆರೋಪಿಗಳನ್ನು ಬಂಧಿಸಿದ ಪೊಲೀಸರು

ಉಡುಪಿ: ಹೆಜಮಾಡಿ ಕೋಡಿ ಬಂದರು ಪ್ರದೇಶದಲ್ಲಿದ್ದ ಕಬ್ಬಿಣದ ವಸ್ತುಗಳ ಕಳ್ಳತನ ಪ್ರಕರಣ; ಆರೋಪಿಗಳನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಉಡುಪಿ: ಹೆಜಮಾಡಿ ಕೋಡಿ ಬಂದರು ಪ್ರದೇಶದಲ್ಲಿದ್ದ ಕಬ್ಬಿಣದ ಶೀಟ್ ಮತ್ತು ರಾಡ್ ಗಳನ್ನು ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 21 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

ಬೆಳ್ತಂಗಡಿ ನಿವಾಸಿಗಳಾದ ಮೊಹಮ್ಮದ್‌ ಹಸೀಬ್‌, ನಿಜಾಮುದ್ದೀನ್‌, ಮೊಹಮ್ಮದ್‌ ಹಫೀಜ್‌, ಮೊಹಮ್ಮದ್‌ ಆಶಿರ್‌ ಕೆ. ಮತ್ತು ಕಬ್ಬಿದ ಸೊತ್ತುಗಳನ್ನು ಖರೀದಿಸಿದ ಹಂಝಾ ಬೆಳ್ತಂಗಡಿ ಬಂಧಿತರು.

ಕಳೆದ ತಿಂಗಳು ಹೆಜಮಾಡಿ ಕೋಡಿ ಬಂದರು ಪ್ರದೇಶದಲ್ಲಿ ಸಂಗ್ರಹಿಸಿಡಲಾಗಿದ್ದ ಸುಮಾರು 18,00,078 ರೂಪಾಯಿ ಮೌಲ್ಯದ ಕಬ್ಬಿಣದ ಶೀಟುಗಳನ್ನು ಮತ್ತು ರಾಡ್‌ಗಳನ್ನು ಕಳವು ಮಾಡಲಾಗಿತ್ತು. ಈ ಬಗ್ಗೆ ಅಕ್ಟೋಬರ್ 3ರಂದು ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಅದರಂತೆ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

- Advertisement -

Latest News

error: Content is protected !!