Tuesday, June 30, 2026
Homeತಾಜಾ ಸುದ್ದಿಬೆಂಗಳೂರಿನಲ್ಲಿ ಯುವತಿಯ ಮೇಲೆ ಗ್ಯಾಂಗ್ ರೇಪ್: ಗುಪ್ತಾಂಗದಲ್ಲಿ ಬೀಯರ್ ಬಾಟಲ್ ಹಾಕಿ ವಿಕೃತಿ ಮೆರೆದ ಐವರ...

ಬೆಂಗಳೂರಿನಲ್ಲಿ ಯುವತಿಯ ಮೇಲೆ ಗ್ಯಾಂಗ್ ರೇಪ್: ಗುಪ್ತಾಂಗದಲ್ಲಿ ಬೀಯರ್ ಬಾಟಲ್ ಹಾಕಿ ವಿಕೃತಿ ಮೆರೆದ ಐವರ ಬಂಧನ

- Advertisement -
- Advertisement -

ಬೆಂಗಳೂರು: ಬೆಂಗಳೂರು ಹೊರವಲಯದಲ್ಲಿ 22 ವರ್ಷದ ಯುವತಿಯನ್ನು ಅತ್ಯಾಚಾರ ಮಾಡಿ ವಿಡಿಯೋ ಮಾಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಯುವತಿಯನ್ನು ಅತ್ಯಾಚಾರಗೈದು ಗುಪ್ತಾಂಗಕ್ಕೆ ಮದ್ಯದ ಬಾಟೆಲ್ ಇರಿಸಿ ವಿಕೃತಿ ಮರೆದಿದ್ದಾರೆ. ಗ್ಯಾಂಗ್‌ರೇಪ್‌ ಪ್ರಕರಣಕ್ಕೆ ಸಂಬಂಧಿಸಿ ರಾಮಮೂರ್ತಿ ನಗರ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಬಾಂಗ್ಲಾದ ಓರ್ವ ಯುವತಿ, ಸಾಗರ್, ರಿದಾಯ್ ಬಾಬು, ಮೊಹಮ್ಮದ್ ಬಾಬಾಶೇಕ್, ಹೈದರಾಬಾದ್‌ನ ಹಕೀಲ್ ಅವರುಗಳೇ ಬಂಧಿತರಾಗಿದ್ದಾರೆ.

ಆರೋಪಿಗಳು ಎನ್​ಆರ್​ಐ ಲೇಔಟ್​​ನಲ್ಲಿ ಕಳೆದ 10 ದಿನಗಳ ಹಿಂದೆ ಬಾಂಗ್ಲಾ ಮೂಲದ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಅತ್ಯಾಚಾರ ದೃಶ್ಯ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದರು. ಸಂತ್ರಸ್ಥೆ ಮತ್ತು ಆರೋಪಿಗಳು ಇಬ್ಬರೂ ಬಾಂಗ್ಲಾದೇಶದ ಮೂಲದರಾಗಿದ್ದು, ಆರೋಪಿಗಳು ಅಕ್ರಮವಾಗಿ ಭಾರತಕ್ಕೆ ಬಂದು ಬೆಂಗಳೂರಿನಲ್ಲಿ ನೆಲೆಸಿದ್ದರು ಎಂದು ಹೇಳಲಾಗಿದೆ.

ಆರೋಪಿಗಳು ವೇಶ್ಯಾವಾಟಿಕೆ ದಂದೆಯಲ್ಲಿ ತೊಡಗಿದ್ದು, ಸಂತ್ರಸ್ಥೆ ಮೇಲಿನ ದ್ವೇಷದಿಂದ ಓರ್ವ ಯುವತಿ ಜತೆಗೆ ನಾಲ್ವರು ಯುವಕರು ಈ ಪೈಶಾಚಿಕ ಕೃತ್ಯ ಎಸಗಿದ್ದರು. ಬಾಂಗ್ಲಾದೇಶ ಸೇರಿದಂತೆ ಭಾರತದ ಈಶಾನ್ಯ ರಾಜ್ಯಗಳಲ್ಲಿ ವಿಡಿಯೋ ವೈರಲ್ ಆಗಿತ್ತು. ಅಸ್ಸಾಂ ರಾಜ್ಯದ ಪೊಲೀಸರಿಂದ ವಿಡಿಯೋ ಕುರಿತು ತನಿಖೆ ನಡೆಸಿದಾಗ ಕೃತ್ಯದಲ್ಲಿ ಬಾಂಗ್ಲಾ ದೇಶದ ಪ್ರಜೆಗಳು ಭಾಗಿಯಾರುವುದು ಬೆಳಕಿಗೆ ಬಂದಿತ್ತು.

ಸದ್ಯ ಅತ್ಯಾಚಾರವೆಸಗಿದ್ದ ಆರೋಪಿಗಳ ವಿರುದ್ಧ ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಎಫ್​​ಐಆರ್ ದಾಖಲು ಮಾಡಲಾಗಿದ್ದು, ಆರೋಪಿಗಳ ವಿರುದ್ಧ ಸೆಕ್ಷನ್ 376(D), 67 ಐಟಿ ಆ್ಯಕ್ಟ್ 14 ಫಾರಿನರ್ಸ್ ಆ್ಯಕ್ಟ್​​ನಡಿ ಎಫ್ಐಆರ್ ದಾಖಲಿಸಲಾಗಿದೆ.

ಆ ಬಳಿಕ ಸಂತ್ರಸ್ಥೆ ಕುಟುಂಬದ ಸದಸ್ಯರನ್ನ ಪತ್ತೆಮಾಡಿದ್ದ ಬಾಂಗ್ಲಾ ಪೊಲೀಸರು ಆರೋಪಿಗಳ ಕುರಿತು ಬೆಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಆವಲಹಳ್ಳಿಯಲ್ಲಿ ಆರೋಪಿಗಳು ತಲೆಮರೆಸಿಕೊಂಡಿರುವುದು ಪತ್ತೆ ಹಚ್ಚಿ ಬಂಧಿಸಿದ ರಾಮಮೂರ್ತಿ ನಗರ ಠಾಣೆ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.

- Advertisement -

Latest News

error: Content is protected !!