Saturday, September 5, 2026
Homeಕರಾವಳಿಕಂಬಳ ಅಭಿವೃದ್ಧಿಗೆ ₹5 ಕೋಟಿ ಅನುದಾನ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ

ಕಂಬಳ ಅಭಿವೃದ್ಧಿಗೆ ₹5 ಕೋಟಿ ಅನುದಾನ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ

- Advertisement -
- Advertisement -

ಮಂಗಳೂರಿನ ಇತಿಹಾಸ ಪ್ರಸಿದ್ಧ ಜಾನಪದ ಕ್ರೀಡೆಯಾದ ಕಂಬಳದ ಅಭಿವೃದ್ಧಿ ಹಾಗೂ ಪ್ರೋತ್ಸಾಹಕ್ಕಾಗಿ ಮುಂದಿನ ಬಜೆಟ್‌ನಲ್ಲಿ ₹5 ಕೋಟಿ ವಿಶೇಷ ಅನುದಾನ ನೀಡುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.

ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್ ನೇತೃತ್ವದಲ್ಲಿ, ರಾಜ್ಯ ಕಂಬಳ ಅಸೋಸಿಯೇಶನ್ ಅಧ್ಯಕ್ಷ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಅವರಿದ್ದ ನಿಯೋಗವು ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಈ ಮನವಿ ಸಲ್ಲಿಸಿತು.

ರಾಜ್ಯದಲ್ಲಿ ನಡೆಯುವ 27 ಕಂಬಳಗಳ ಆಯೋಜನೆಗಾಗಿ ₹5 ಕೋಟಿ ಅನುದಾನ ಒದಗಿಸುವುದು ಹಾಗೂ ಸೆ.18ರ ಮಂಗಳೂರು ಸಚಿವ ಸಂಪುಟ ಸಭೆಯಲ್ಲಿ ಈ ಪ್ರಸ್ತಾವನೆ ಮಂಡಿಸುವಂತೆ ನಿಯೋಗ ಕೋರಿಕೊಂಡಿತು. ಇದಕ್ಕೆ ಧನಾತ್ಮಕವಾಗಿ ಸ್ಪಂದಿಸಿದ ಅವರು, ಮೈಸೂರು ದಸರಾ ಸಂದರ್ಭದಲ್ಲಿ ನಡೆಯಲಿರುವ ಐತಿಹಾಸಿಕ ಕಂಬಳವನ್ನು ಅತ್ಯಂತ ಶಿಸ್ತುಬದ್ಧವಾಗಿ ಮತ್ತು ಯಶಸ್ವಿಯಾಗಿ ಆಯೋಜಿಸುವಂತೆ ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ, ಕಂಬಳಕ್ಕೆ ರಾಜ್ಯ ಮಾನ್ಯತೆ ದೊರೆತ ಹಿನ್ನೆಲೆಯಲ್ಲಿ ಅಸೋಸಿಯೇಶನ್ ವತಿಯಿಂದ ಅವರನ್ನು ಗೌರವಿಸಲಾಯಿತು.

- Advertisement -

Latest News

error: Content is protected !!