Sunday, June 7, 2026
Homeಇತರಭೀಕರ ಅಪಘಾತ: ಐವರು ವಲಸೆ ಕಾರ್ಮಿಕರು ಸ್ಥಳದಲ್ಲೇ ಸಾವು -11 ಮಂದಿ ಆಸ್ಪತ್ರೆಗೆ ದಾಖಲು

ಭೀಕರ ಅಪಘಾತ: ಐವರು ವಲಸೆ ಕಾರ್ಮಿಕರು ಸ್ಥಳದಲ್ಲೇ ಸಾವು -11 ಮಂದಿ ಆಸ್ಪತ್ರೆಗೆ ದಾಖಲು

- Advertisement -
- Advertisement -

ಲಾರಿ ಉರುಳಿ ಬಿದ್ದು ಐವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದ ನರಸಿಂಗಪುರ್ ಪಥಾ ಗ್ರಾಮದ ಬಳಿ ನಡೆದಿದೆ.

ತೆಲಂಗಾಣ ರಾಜ್ಯದಿಂದ ಉತ್ತರಪ್ರದೇಶಕ್ಕೆ ತೆರಳುತ್ತಿದ್ದ ಲಾರಿಯಲ್ಲಿದ್ದ 11 ಜನರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

18 ಮಂದಿ ಕಾರ್ಮಿಕರು ಮಾವಿನಹಣ್ಣು ಸಾಗಿಸುತ್ತಿದ್ದ ಲಾರಿಯಲ್ಲಿ ಪ್ರಯಾಣಿಸುತ್ತಿದ್ದರು. ಪಥಾ ಗ್ರಾಮದ ಬಳಿ ಸಾಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು ಐವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇವರೆಲ್ಲ ತೆಲಂಗಾಣದ ಹೈದರಾಬಾದ್ನಿಂದ ಉತ್ತರಪ್ರದೇಶದ ಆಗ್ರಾಕ್ಕೆ ಪ್ರಯಾಣ ಬೆಳೆಸುತ್ತಿದ್ದರು ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement -

Latest News

error: Content is protected !!