Friday, March 29, 2024
Homeಕರಾವಳಿಮಂಗಳೂರು; ಪೋಕ್ಸೋ ಪ್ರಕರಣದಲ್ಲಿ ನಿರಪರಾಧಿಯನ್ನು ಬಂಧಿಸಿದ ಪ್ರಕರಣ; ಇಬ್ಬರು ಪೊಲೀಸ್ ಅಧಿಕಾರಿಗಳಿಗೆ 5 ಲಕ್ಷ ರೂಪಾಯಿ...

ಮಂಗಳೂರು; ಪೋಕ್ಸೋ ಪ್ರಕರಣದಲ್ಲಿ ನಿರಪರಾಧಿಯನ್ನು ಬಂಧಿಸಿದ ಪ್ರಕರಣ; ಇಬ್ಬರು ಪೊಲೀಸ್ ಅಧಿಕಾರಿಗಳಿಗೆ 5 ಲಕ್ಷ ರೂಪಾಯಿ ದಂಡ

spot_img
- Advertisement -
- Advertisement -

ಮಂಗಳೂರು: ಪೋಕ್ಸೋ ಪ್ರಕರಣದಲ್ಲಿ ನಿರಪರಾಧಿಯನ್ನು ಜೈಲಿಗಟ್ಟಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹಿಳಾ ಪೊಲಿಸ್ ಅಧಿಕಾರಿಗಳಿಬ್ಬರಿಗೆ 5 ಲಕ್ಷ ರೂಪಾಯಿ ಪರಿಹಾರವನ್ನು ತಮ್ಮ ಸ್ವಂತ ಹಣದಿಂದಲೇ ನೀಡಬೇಕೆಂದು ಎರಡನೇ ಹೆಚ್ಚುವರಿ ಎಫ್‌ಟಿಎಸ್‌ಸಿ ಪೋಕ್ಸೋ ನ್ಯಾಯಾಲಯ ಆದೇಶ ನೀಡಿದೆ.


ಮಂಗಳೂರು ಮಹಿಳಾ ಪೊಲೀಸ್‌ ಠಾಣಾ ನಿರೀಕ್ಷಕರಾದ ರೇವತಿ ಮತ್ತು ಉಪನಿರೀಕ್ಷಕರಾದ ರೋಸಮ್ಮ ಪಿ ಪಿ ಅವರು ಆರೋಪಿ ನವೀನ್‌ ಸಿಕ್ವೇರಾ ಅವರಿಗೆ 5,00,000 ರೂ. ಪರಿಹಾರವನ್ನು ನೀಡಬೇಕು ಎಂದು ನ್ಯಾಯಾಧೀಶರು ಆದೇಶಿಸಿದ್ದಾರೆ. ಇಬ್ಬರು ಪೊಲೀಸ್‌ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಸರಕಾರದ ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೂ ಆದೇಶಿಸಿದ್ದಾರೆ.

ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ದಾಖಲಾದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ನವೀನ್ ಎಂಬ ಆರೋಪಿಯನ್ನು ಬಂಧಿಸುವ ಬದಲು ಪೊಲೀಸರು ನವೀನ್ ಸಿಕ್ವೇರಾ ಎಂಬ ವ್ಯಕ್ತಿಯನ್ನು ಬಂಧಿಸಲಾಗಿತ್ತು. ಆದರೆ ನೊಂದ ಬಾಲಕಿ ತನ್ನ ಫಿರ್ಯಾದಿಯಲ್ಲಿ ಮತ್ತು ನ್ಯಾಯಾಧೀಶರ ಮುಂದೆ ನೀಡಿದ ಹೇಳಿಕೆಯಲ್ಲಿ, ಕೇವಲ ನವೀನ್‌ ಎಂಬ ಆರೋಪಿಯ ಹೆಸರನ್ನು ಉಲ್ಲೇಖೀಸಿದ್ದಳು.ನವೀನ್‌ ಸಿಕ್ವೇರಾನನ್ನೇ ಆರೋಪಿಯನ್ನಾಗಿಸಿ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು.
ಆರೋಪಿ ಪರ ವಕೀಲರಾದ ರಾಜೇಶ್‌ಕುಮಾರ್‌ ಮತ್ತು ಗಿರೀಶ್‌ ಶೆಟ್ಟಿ ಅವರು ವಾದ ಮಂಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಧೀಶ ಕೆ.ಯು.ರಾಧಾಕೃಷ್ಣ ಅವರು, ನವೀನ್‌ ಸಿಕ್ವೇರಾ ನಿರಪರಾಧಿ ಎಂದು ಖುಲಾಸೆ ಗೊಳಿಸಿದ್ದಾರೆ. ಅಲ್ಲದೆ ಪೊಲೀಸ್‌ ಅಧಿಕಾರಿಗಳು ನಿಜವಾದ ವ್ಯಕ್ತಿಯನ್ನು ಬಂಧಿಸದೆ, ನವೀನ್‌ ಸಿಕ್ವೇರ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಕ್ಕೆ 5 ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶಿಸಿದ್ದಾರೆ.

- Advertisement -
spot_img

Latest News

error: Content is protected !!