Thursday, June 4, 2026
Homeತಾಜಾ ಸುದ್ದಿಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ- ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ ಐವರು!..

ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ- ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ ಐವರು!..

- Advertisement -
- Advertisement -

ಈರೋಡ್ : ಇಲ್ಲಿನ ಕಾವೇರಿ ಪಟ್ಟಣಂ ಬಳಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ನಡೆದಿದೆ. ಅಪಘಾತದ ತೀವ್ರತೆಗೆ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಪ್ರಯಾಣಿಕರನ್ನು ಇಳಿಸಲು ನಿಂತಿದ್ದ ತಮಿಳುನಾಡು ಸರ್ಕಾರಿ ಬಸ್ ಗೆ ಹಿಂಬದಿಯಿಂದ ಬಂದು ಓಮ್ನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಮೃತರು ಬಸ್ ನಲ್ಲಿದ್ದ ಪ್ಯಾಸೆಂಜರ್ ದೇವರಾಜು, ಕಾರಿನಲ್ಲಿದ್ದ ಪ್ರಶಾಂತ್, ಲಿಂಗಾ, ಸುರೇಂದರ್, ಶಿವಕುಮಾರ್ ಎಂದು ಗುರುತಿಸಲಾಗಿದೆ. ಇನ್ನು ಓಮ್ನಿಯಲ್ಲಿದ್ದ ಗೌತಮ್ , ಭರಣಿ ಹಾಗೂ ಅಶೋಕ್ ಎಂಬುವರಿಗೆ ತೀವ್ರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ವ್ಯವಸ್ಥೆ ಮಾಡಲಾಗಿದ್ದು ತನಿಖೆ ನಡೆಯುತ್ತಿದೆ.

- Advertisement -

Latest News

error: Content is protected !!