Wednesday, May 8, 2024
Homeಕರಾವಳಿದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ಕೋವಿಡ್ ಪ್ರಕರಣ ಪತ್ತೆ : ರಾಜ್ಯದಲ್ಲೇ 2ನೇ ಸ್ಥಾನದಲ್ಲಿ ದಕ್ಷಿಣ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ಕೋವಿಡ್ ಪ್ರಕರಣ ಪತ್ತೆ : ರಾಜ್ಯದಲ್ಲೇ 2ನೇ ಸ್ಥಾನದಲ್ಲಿ ದಕ್ಷಿಣ ಕನ್ನಡ

spot_img
- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 156 ಹೊಸ‌ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 5 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ರಾಜ್ಯದಲ್ಲೇ ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನದಲ್ಲಿದೆ.

ಬೆಂಗಳೂರು ನಗರದಲ್ಲಿ 143 ಪ್ರಕರಣಗಳು ಪತ್ತೆಯಾಗಿದ್ದರೆ, ಕೋಲಾರ ಜಿಲ್ಲೆಯಲ್ಲಿ 4, ಧಾರವಾಡ, ರಾಯಚೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ತಲಾ 1 ಪ್ರಕರಣಗಳು ಪತ್ತೆಯಾಗಿವೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 15 ಸಕ್ರೀಯ ಪ್ರಕರಣಗಳು ಇದ್ದರೆ, ಉಡುಪಿ ಜಿಲ್ಲೆಯಲ್ಲಿ ಒಂದು ಸಕ್ರೀಯ ಪ್ರಕರಣ ಇದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಟ್ಟು 5 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

- Advertisement -
spot_img

Latest News

error: Content is protected !!