Saturday, May 18, 2024
Homeತಾಜಾ ಸುದ್ದಿಧಾರವಾಡದಲ್ಲಿ ನಡೆದ ರಸ್ತೆ ಅಪಘಾತಕ್ಕೆ 5 ವರ್ಷದ ಮಗು ಬಲಿ; 11ಕ್ಕೆ ಏರಿದ ಸಾವಿನ ಸಂಖ್ಯೆ 

ಧಾರವಾಡದಲ್ಲಿ ನಡೆದ ರಸ್ತೆ ಅಪಘಾತಕ್ಕೆ 5 ವರ್ಷದ ಮಗು ಬಲಿ; 11ಕ್ಕೆ ಏರಿದ ಸಾವಿನ ಸಂಖ್ಯೆ 

spot_img
- Advertisement -
- Advertisement -

ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ ಮೇ 20ರಂದು ನಡೆದಿದ್ದ ಭೀಕರ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ 5 ವರ್ಷದ ಮಗು ಸೇರಿ ಇಬ್ಬರು ಚಿಕಿತ್ಸೆ ಫಲಕಾರಿಯಾಗದೇ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.

 

ಇದೇ ಮೇ 20 ರಂದು ಧಾರವಾಡದ ಬಾಡ ಬಳಿ ನಿಶ್ಚಿತಾರ್ಥ ಮುಗಿಸಿಕೊಂಡು ಹೊರಟಿದ್ದ ಕ್ರೂಸರ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ 9 ಮಂದಿ ಮೃತಪಟ್ಟಿದ್ದರು. ಐಸಿಯುನಲ್ಲಿದ್ದ ಆರಾಧ್ಯ ಹುತಮಲ್ಲಣವರ (5) ಹಾಗೂ ಮುತ್ತು ಮರಿಗೌಡ (16) ಇಂದು ಮೃತಪಟ್ಟಿದ್ದು ಸಾವಿನ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.

ಈ ಘಟನೆ ಬಗ್ಗೆ ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಧಾರವಾಡದ ಬಾಡ ಗ್ರಾಮದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ 9 ಜನರ ಕುಟುಂಬಗಳಿಗೆ ಕೇಂದ್ರ ಸಚಿವರಾದ @JoshiPralhad ಅವರ ಮನವಿಯ ಮೇರೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ ರೂ. 5 ಲಕ್ಷ ಪರಿಹಾರ ನೀಡಲಾಗುವುದು. ಈ ಅಪಘಾತ ಅತ್ಯಂತ ದುರದೃಷ್ಟಕರವಾಗಿದ್ದು, ಮೃತಪಟ್ಟ ಎಲ್ಲರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

- Advertisement -
spot_img

Latest News

error: Content is protected !!