Sunday, June 7, 2026
Homeಕರಾವಳಿಮಗಳ ಮೇಲೆಯೇ ಅತ್ಯಾಚಾರ ಯತ್ನ ಪ್ರಕರಣ : ಆರೋಪಿಗೆ 5 ವರ್ಷ ಜೈಲು ಶಿಕ್ಷೆ

ಮಗಳ ಮೇಲೆಯೇ ಅತ್ಯಾಚಾರ ಯತ್ನ ಪ್ರಕರಣ : ಆರೋಪಿಗೆ 5 ವರ್ಷ ಜೈಲು ಶಿಕ್ಷೆ

- Advertisement -
- Advertisement -

ಸುಳ್ಯ : ತಾಲೂಕಿನ ಎಣ್ಮೂರು ಎಂಬಲ್ಲಿ ಅಪ್ರಾಪ್ತ ಮಗಳ ಮೇಲೆ ಆರು ವರ್ಷಗಳ ಹಿಂದೆ ಸ್ವತಃ ತಂದೆಯೇ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರಿನ ವಿಶೇಷ ನ್ಯಾಯಾಲಯ ಹಾಗೂ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿಗೆ ಜೈಲು‌ ಶಿಕ್ಷೆ ವಿಧಿಸಿದೆ.

ಸ್ವತಃ ಪುತ್ರಿಯ ಮೇಲೆ ತಂದೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಈ ಘಟನೆಯ ಬಗ್ಗೆ ಬಾಲಕಿಯ ತಾಯಿಯು ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಆರೋಪಿಯ ವಿರುದ್ಧ ಕಲಂ 376, 504, 323 ಮತ್ತು ಪೋಕ್ಸೋ ಕಾಯ್ದೆ ಕಲಂ 4ರ ಪ್ರಕಾರ ಪ್ರಕರಣ ದಾಖಲಿಸಿದ್ದರು. ಅಂತಿಮವಾಗಿ ಆರೋಪಿಯು ಬಾಲಕಿಯನ್ನು ಅತ್ಯಾಚಾರವೆಸಗಲು ಪ್ರಯತ್ನಿಸಿದ್ದಾಗಿ ಮಾನ್ಯ ನ್ಯಾಯಾಲಯವು ಅಭಿಪ್ರಾಯಪಟ್ಟು ಆರೋಪಿ ತಪ್ಪಿತಸ್ಥನೆಂದು ಇಂದು ತೀರ್ಪು ನೀಡಿದೆ.

ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು ರೂಪಾಯಿ 25,000/-ದಂಡ, ದಂಡ ತೆರಲು ತಪ್ಪಿದ್ದಲ್ಲಿ ಹೆಚ್ಚುವರಿಯಾಗಿ 1 ವರ್ಷ ಸಾದಾ ಸ್ವರೂಪದ ಶಿಕ್ಷೆ ವಿಧಿಸಿದೆ.

- Advertisement -

Latest News

error: Content is protected !!