Monday, April 29, 2024
Homeತಾಜಾ ಸುದ್ದಿಮೊದಲ ಬಾರಿಗೆ ಕೆಎಸ್ಆರ್ ಟಿಸಿ ಸಿಬ್ಬಂದಿಗಳಿಗೆ 50 ಲಕ್ಷ ರೂ. ಅಪಘಾತ ವಿಮಾ ಯೋಜನೆ ಸೌಲಭ್ಯ...

ಮೊದಲ ಬಾರಿಗೆ ಕೆಎಸ್ಆರ್ ಟಿಸಿ ಸಿಬ್ಬಂದಿಗಳಿಗೆ 50 ಲಕ್ಷ ರೂ. ಅಪಘಾತ ವಿಮಾ ಯೋಜನೆ ಸೌಲಭ್ಯ ಜಾರಿ

spot_img
- Advertisement -
- Advertisement -

ಬೆಂಗಳೂರು: ಕೆಎಸ್ ಆರ್ ಟಿಸಿ ಸಿಬ್ಬಂದಿಗಳ ಆಕಸ್ಮಿಕ ಅಗಲಿಕೆ ಅಥವಾ ಅಂಗವೈಕಲ್ಯತೆ ಅವರ ಪರಿವಾರದವರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಬಾರದೆಂಬ ಕಾರಣದಿಂದ ಅವರ ಅವಲಂಬಿತರ ಹಿತ ಕಾಪಾಡುವ ಅಪಘಾತ ವಿಮಾ ಪ್ಯಾಕೇಜ್ ಯೋಜನೆಯ ಒಡಂಬಡಿಕೆಯನ್ನು ಕೆಎಸ್ ಆರ್ ಟಿಸಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದೊಂದಿಗೆ ಮಾಡಿಕೊಂಡಿದೆ.

ಈ ಸಿಬ್ಬಂದಿಗಳ ವೇತನ ಪ್ಯಾಕೇಜ್ ಅಪಘಾತ ವಿಮಾ ಯೋಜನೆಯು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ತಮ್ಮ ವೇತನ ಖಾತೆಯನ್ನು ಹೊಂದಿರುವ ನಿಗಮದ ನೌಕರರಿಗೆ ಪ್ರೀಮಿಯಂ ರಹಿತ ವೈಯುಕ್ತಿಕ ಅಪಘಾತ ವಿಮೆಯನ್ನು ಒಳಗೊಂಡಿದೆ.

ಅಲ್ಲದೇ, ಈ ವೈಯುಕ್ತಿಕ ವಿಮಾ ಯೋಜನೆಯಿಂದ ಪಾಲಿಸಿದಾರರು ಅಫಘಾತದಲ್ಲಿ ಮೃತಪಟ್ಟಲ್ಲಿ ಅವರ ಅವಲಂಬಿತರಿಗೆ 50 ಲಕ್ಷ ರೂಪಾಯಿಗಳ ಪರಿಹಾರದ ಹಣ ಕೂಡಲೇ ದೊರೆಯಲಿದೆ.

ಅಫಘಾತದಲ್ಲಿ ಸಿಬ್ಬಂದಿಗಳು ಶಾಶ್ವತವಾಗಿ ಪೂರ್ಣ ಅಂಗವೈಕಲ್ಯಕ್ಕೆ ತುತ್ತಾದಲ್ಲಿ 20 ಲಕ್ಷ ರೂಪಾಯಿ ಹಣ ಹಾಗೂ ಶಾಶ್ವತ ಭಾಗಶ: ಅಂಗವೈಕಲ್ಯ ಉಂಟಾದಲ್ಲಿ 10 ಲಕ್ಷ ರೂಪಾಯಿಗಳ ವಿಮಾ ಪರಿಹಾರ ದೊರೆಯಲಿದೆ. ಈ ವಿಮಾ ಯೋಜನೆಯಲ್ಲಿ ಕರ್ತವ್ಯ ನಿರತ ಹಾಗೂ ಕರ್ತವ್ಯದಲ್ಲಿ ಇಲ್ಲದ ಸಮಯದಲ್ಲೂ ಆಗುವ ವೈಯಕ್ತಿಕ ಅಪಘಾತಗಳಿಗೂ ವಿಮೆ ಅನ್ವಯಿಸುತ್ತದೆ.

ಸಿಬ್ಬಂದಿಗಳ ಅಪಘಾತದಲ್ಲಿನ ಪ್ಲಾಸ್ಟಿಕ್ ಸರ್ಜರಿ ಚಿಕಿತ್ಸೆಗಾಗಿ ಗರಿಷ್ಟ 10 ಲಕ್ಷ ರೂಪಾಯಿಗಳ, ಔಷಧಗಳ ಆಮದಿಗಾಗಿ ಗರಿಷ್ಟ 5 ಲಕ್ಷ ರೂಪಾಯಿಗಳ, ಕೋಮಾದಲ್ಲಿ ಮೃತಪಟ್ಟರೆ ಹೆಚ್ಚುವರಿ 2 ಲಕ್ಷ ರೂಪಾಯಿಗಳ, ಏರ್ ಅಂಬ್ಯುಲೆನ್ಸ್ ಸೇವೆಗೆ 10 ಲಕ್ಷ ರೂಪಾಯಿಗಳ ವಿಮಾ ಪರಿಹಾರ ನೀಡಲಾಗುತ್ತದೆ.

ಇನ್ನು ಸಿಬ್ಬಂದಿಗಳು ಅಪಘಾತದಲ್ಲಿ ಮೃತಪಟ್ಟರೆ ಮಕ್ಕಳ ಪದವಿ ಶಿಕ್ಷಣಕ್ಕೆ ಗರಿಷ್ಟ 5 ಲಕ್ಷ ರೂಪಾಯಿಗಳ ಹಾಗೂ ಹೆಣ್ಣು ಮಗಳ ವಿವಾಹಕ್ಕೆ ಗರಿಷ್ಟ 5 ಲಕ್ಷ ರೂಪಾಯಿಗಳವರೆಗೆ ಆರ್ಥಿಕ ಸಹಾಯವನ್ನು ಈ ವಿಮಾ ಯೋಜನೆಯು ಒಳಗೊಂಡಿರುತ್ತದೆ.

- Advertisement -
spot_img

Latest News

error: Content is protected !!