Wednesday, July 15, 2026
Homeಕರಾವಳಿಮಂಗಳೂರು ವಿವಿಗೆ ರಾಜ್ಯ ಸರ್ಕಾರದಿಂದ 50 ಲಕ್ಷ ರೂ. ಪ್ರೋತ್ಸಾಹ ಧನ ಘೋಷಣೆ

ಮಂಗಳೂರು ವಿವಿಗೆ ರಾಜ್ಯ ಸರ್ಕಾರದಿಂದ 50 ಲಕ್ಷ ರೂ. ಪ್ರೋತ್ಸಾಹ ಧನ ಘೋಷಣೆ

- Advertisement -
- Advertisement -

ಮಂಗಳೂರು: ಮಂಗಳೂರು ವಿಶ್ವವಿದ್ಯಾಲಯಕ್ಕೆ ರಾಜ್ಯ ಸರ್ಕಾರದಿಂದ 50 ಲಕ್ಷ ರೂಪಾಯಿ ಪ್ರೋತ್ಸಾಹ ಧನ ಲಭಿಸಿದೆ.ಉತ್ತಮ ಇ-ಆಡಳಿತ ವಿಭಾಗದಲ್ಲಿ ಸಾಧನೆ ಮಾಡಿದ ಹಿನ್ನೆಲೆಯಲ್ಲಿ ಪ್ರೋತ್ಸಾಹ ಧನ ಘೋಷಣೆ ಮಾಡಲಾಗಿದೆ.

ವಿವಿಧ ವಿಭಾಗಗಳಲ್ಲಿ ಸಾಧನೆ ಮಾಡಿದ ರಾಜ್ಯದ ಏಳು ಸರ್ಕಾರಿ ವಿಶ್ವವಿದ್ಯಾನಿಲಯಗಳಿಗೆ ತಲಾ ಐವತ್ತು ಲಕ್ಷ ರೂಪಾಯಿ ಪ್ರೋತ್ಸಾಹ ಧನ ಘೋಷಿಸಲಾಗಿದೆ.

ಬೆಂಗಳೂರು, ಮೈಸೂರು, ಧಾರವಾಡ, ದಾವಣಗೆರೆ, ಶ್ರೀಕೃಷ್ಣದೇವರಾಯ ಮತ್ತು ರಾಣಿ ಚೆನ್ನಮ್ಮ ವಿವಿಗಳು ಪ್ರೋತ್ಸಾಹ ಧನ ಪಡೆದಿರುವ ಇತರ ವಿಶ್ವವಿದ್ಯಾನಿಲಯಗಳಾಗಿವೆ.

- Advertisement -

Latest News

error: Content is protected !!