Sunday, June 7, 2026
Homeತಾಜಾ ಸುದ್ದಿಸಹಕಾರ ಕ್ಷೇತ್ರದ ಬ್ಯಾಂಕ್ ಗಳಲ್ಲಿ 5000 ಹುದ್ದೆಗಳ ನೇಮಕಾತಿ: ಸಚಿವ ಎಸ್.ಟಿ. ಸೋಮಶೇಖರ್

ಸಹಕಾರ ಕ್ಷೇತ್ರದ ಬ್ಯಾಂಕ್ ಗಳಲ್ಲಿ 5000 ಹುದ್ದೆಗಳ ನೇಮಕಾತಿ: ಸಚಿವ ಎಸ್.ಟಿ. ಸೋಮಶೇಖರ್

- Advertisement -
- Advertisement -

ತುಮಕೂರು: ರಾಜ್ಯದ ಸಹಕಾರ ಕ್ಷೇತ್ರದ ಬ್ಯಾಂಕ್ ಗಳಲ್ಲಿ 5000 ಹುದ್ದೆಗಳ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.

ತುಮಕೂರು ಡಿಸಿಸಿ ಬ್ಯಾಂಕ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2000 ಹುದ್ದೆಗಳ ಭರ್ತಿಗೆ ಸಹಕಾರ ಇಲಾಖೆ ಅನುಮತಿ ನೀಡಿದ್ದು, ಖಾಲಿ ಇರುವ 5000 ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಗ್ರಾಮ ಪಂಚಾಯಿತಿಗೆ ಒಂದರಂತೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಶಾಖೆ ತೆರೆಯಲಾಗುವುದು. ಅಪೆಕ್ಸ್ ಬ್ಯಾಂಕ್, 21 ಡಿಸಿಸಿ ಬ್ಯಾಂಕ್ ಸೇರಿದಂತೆ 5000 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಒಂದೇ ತಂತ್ರಾಂಶದಡಿ ತರುವ ಚಿಂತನೆ ನಡೆಸಲಾಗಿದೆ ಎಂದರು.

- Advertisement -

Latest News

error: Content is protected !!