Saturday, May 18, 2024
Homeಕರಾವಳಿಮಂಗಳೂರು: ಬಾಲ ಕಾರ್ಮಿಕ ಕಾಯ್ದೆ ಉಲ್ಲಂಘಿಸಿದವರಿಗೆ 50 ಸಾವಿರ ರೂ.ಗಳ ದಂಡ ಹಾಗೂ ಎರಡು ವರ್ಷಗಳ...

ಮಂಗಳೂರು: ಬಾಲ ಕಾರ್ಮಿಕ ಕಾಯ್ದೆ ಉಲ್ಲಂಘಿಸಿದವರಿಗೆ 50 ಸಾವಿರ ರೂ.ಗಳ ದಂಡ ಹಾಗೂ ಎರಡು ವರ್ಷಗಳ ಜೈಲು ಶಿಕ್ಷೆ

spot_img
- Advertisement -
- Advertisement -

ಮಂಗಳೂರು: ಬಾಲ ಕಾರ್ಮಿಕ ಕಾಯ್ದೆ ಉಲ್ಲಂಘಿಸಿದವರಿಗೆ 50 ಸಾವಿರ ರೂ.ಗಳ ದಂಡ ಹಾಗೂ ಎರಡು ವರ್ಷಗಳ ಜೈಲು ಶಿಕ್ಷೆಯೊಂದಿಗೆ ಕೋವಿಡ್-19 ಸಂಕಷ್ಟದ ಸಮಯದಲ್ಲಿ ಮಕ್ಕಳನ್ನು ಬಾಲ ಕಾರ್ಮಿಕತೆಯಿಂದ ಮುಕ್ತವಾಗಿಸಲು ಜಿಲ್ಲಾಧಿಕಾರಿಯವರ ನಿರ್ದೇಶನದಂತೆ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ.

ಅದರ ಅಂಗವಾಗಿ ಕಾರ್ಮಿಕ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಫ್ಯಾಕ್ಟರಿ ಮತ್ತು ಬಾಯ್ಲರ್ ಇಲಾಖೆ ಮತ್ತು ಮಹಾನಗರ ಪಾಲಿಕೆಯ ಅಧಿಕಾರಿಗಳ ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಸಮಿತಿಯನ್ನು ರಚಿಸಿಕೊಂಡು ಮಂಗಳೂರು ನಗರದ ಅಪಾರ್ಟ್‍ಮೆಂಟ್‍ಗಳು, ಹೋಟೆಲ್‍ಗಳು, ಗ್ಯಾರೇಜ್ ಹಾಗೂ ಫ್ಯಾಕ್ಟರಿಗಳಿಗೆ ಫೆ.8ರ ಮಂಗಳವಾರ ಅನಿರೀಕ್ಷಿತ ದಾಳಿ ನಡೆಸಿ, ಪರಿಶೀಲಿಸಿದರು.

ಈ ವೇಳೆ ಬಾಲಕಾರ್ಮಿಕ ಕಾಯ್ದೆಯ ಬಗ್ಗೆ ಮಾಹಿತಿ ನೀಡುವುದರೊಂದಿಗೆ ಸ್ಟಿಕ್ಕರ್ ಮತ್ತು ಕರಪತ್ರಗಳನ್ನು ಹಂಚುವ ಮೂಲಕ ಜಾಗೃತಿ ಮೂಡಿಸಿದರು.

ಸಹಾಯಕ ಕಾರ್ಮಿಕ ಆಯುಕ್ತ ಬಿ.ಇ. ಶಿವಕುಮಾರ್, ಕಾರ್ಮಿಕ ಅಧಿಕಾರಿ ಅಮರೇಂದ್ರ, ಟಿ. ಕಾವೇರಿ ಹಾಗೂ ಹಿರಿಯ ಕಾರ್ಮಿಕ ನಿರೀಕ್ಷಕರಾದ ಜೀವನ್ ಕುಮಾರ್, ಮೇರಿ ಪಿ ಡಯಾಸ್, ವೀರೆಂದ್ರ ಕುಂಬಾರ್ ಶ್ರೀನಿವಾಸ್, ಯೋಜನಾ ನಿರ್ದೇಶಕರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ದಾಳಿಯಲ್ಲಿ ಪಾಲ್ಗೊಂಡಿದ್ದರು.ಬಾಲಕಾರ್ಮಿಕರು ಕಂಡುಬಂದರೆ ಚೈಲ್ಡ್ ಲೈನ್-1098, ಕಾರ್ಮಿಕ ಇಲಾಖೆ ದೂ.ಸಂಖ್ಯೆ:0824-2435343, ಜಿಲ್ಲಾ ಕಾರ್ಮಿಕ ಯೋಜನಾ ಸಂಘ ದೂ.ಸಂಖ್ಯೆ: 2433131 ಸಂಖ್ಯೆಗಳಿಗೆ ಕರೆ ಮಾಡಿ ದೂರು ನೀಡುವಂತೆ ಸಹಾಯಕ ಕಾರ್ಮಿಕ ಆಯುಕ್ತರು ಪ್ರಕಟಣೆಯಲ್ಲಿ ಕೋರಿದ್ದಾರೆ.

- Advertisement -
spot_img

Latest News

error: Content is protected !!