Saturday, June 6, 2026
Homeಪ್ರಮುಖ-ಸುದ್ದಿರಾಜ್ಯದಲ್ಲಿ ಸತತ ಮೂರನೇ ದಿನವೂ 5 ಸಾವಿರದ ಗಡಿ ದಾಟಿದ ಸೋಂಕಿತರ ಸಂಖ್ಯೆ, ಬೆಂಗಳೂರಿನಲ್ಲಿ 2...

ರಾಜ್ಯದಲ್ಲಿ ಸತತ ಮೂರನೇ ದಿನವೂ 5 ಸಾವಿರದ ಗಡಿ ದಾಟಿದ ಸೋಂಕಿತರ ಸಂಖ್ಯೆ, ಬೆಂಗಳೂರಿನಲ್ಲಿ 2 ಸಾವಿರಕ್ಕೂ ಹೆಚ್ಚು ಮಂದಿಗೆ ಸೋಂಕು

- Advertisement -
- Advertisement -

ಬೆಂಗಳೂರು : ರಾಜ್ಯದಲ್ಲಿ ಸತತ ಮೂರನೇ ದಿನವೂ ಕೊರೊನಾ ಸೋಂಕಿತರ ಸಂಖ್ಯೆ 5 ಸಾವಿರದ ಗಡಿ ದಾಟಿದೆ. ಇವತ್ತು ಬರೋಬ್ಬರಿ 5072 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಆ ಮೂಲಕ ರಾಜ್ಯದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 90,942ಕ್ಕೆ ಏರಿಕೆಯಾಗಿದೆ. ಇನ್ನು ಇವತ್ತು 72 ಜನ ರಾಜ್ಯದಲ್ಲಿ ಕೊರೊನಾಗೆ ಬಲಿಯಾಗಿದ್ದಾರೆ.

ಸದ್ಯ ರಾಜ್ಯದಲ್ಲಿ 55,388 ಪ್ರಕರಣಗಳಿದ್ದು, 33,750 ಮಂದಿ ಕೊರೊನಾದಿಂದ ಇದುವೆರೆಗು ಗುಣಮುಖರಾಗಿದ್ದಾರೆ. ಇನ್ನು ಇಂದು ಒಂದೇ ದಿನದಲ್ಲಿ 2,403 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಇನ್ನು ಬೆಂಗಳೂರಿನಲ್ಲಿ ಇಂದು ಒಂದೇ ದಿನ 2036 ಮಂದಿ ಕೋವಿಡ್ ಸೋಂಕಿಗೆ ಒಳಗಾಗಿದ್ದಾರೆ. ಹಾಗೇ 30 ಮಂದಿ ಹೆಮ್ಮಾರಿಗೆ ಬಲಿಯಾಗಿದ್ದಾರೆ. ಸದ್ಯ ಸಿಲಿಕಾನ್ ಸಿಟಿಯಲ್ಲಿ ಸೋಂಕಿತರ ಸಂಖ್ಯೆ 31881ಕ್ಕೆ ಏರಿಕೆಯಾಗಿದೆ. ಇಂದು 686 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.

- Advertisement -

Latest News

error: Content is protected !!