Thursday, June 4, 2026
Homeಕರಾವಳಿಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ; ವಧು-ವರರಿಂದ ಅರ್ಜಿ ಆಹ್ವಾನ

ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ; ವಧು-ವರರಿಂದ ಅರ್ಜಿ ಆಹ್ವಾನ

- Advertisement -
- Advertisement -

ಉಜಿರೆ: ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹವು 2024ರ ಮೇ 1ರಂದು ಸಂಜೆ 6.45ರ ಗೋಧೂಳಿ ಲಗ್ನದಲ್ಲಿ ನಡೆಯಲಿದೆ.

ದೇವಸ್ಥಾನದ ವತಿಯಿಂದ ವರನಿಗೆ ಧೋತಿ, ಶಾಲು, ವಧುವಿಗೆ ಸೀರೆ, ರವಿಕೆ ಕಣ ಮತ್ತು ಮಂಗಳಸೂತ್ರ ನೀಡಲಾಗುವುದು. ಎರಡನೇ ವಿವಾಹಕ್ಕೆ ಅವಕಾಶವಿಲ್ಲ. ಉಚಿತ ಸಾಮೂಹಿಕ ವಿವಾಹದಲ್ಲಿ ಮದುವೆ ಅಗಲಿಚ್ಛಿಸುವವರು ಏ.20ರೊಳಗೆ ತಮ್ಮ ಮಾಹಿತಿ ಹಾಗೂ ಸೂಕ್ತ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಬಹುದು.

ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರು 1972ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹದಲ್ಲಿ ಕಳೆದ ವರ್ಷದವರೆಗೆ 12,777 ಜೋಡಿ ದಾಂಪತ್ಯಕ್ಕೆ ಕಾಲಿರಿಸಿದ್ದಾರೆ. ಮಾಹಿತಿಗಾಗಿ ದೂ: 08256 266644, 9663464648, 8147263422 ಸಂಪರ್ಕಿಸಬಹುದು.

- Advertisement -

Latest News

error: Content is protected !!