Friday, June 5, 2026
Homeಪ್ರಮುಖ-ಸುದ್ದಿರಾಜ್ಯದಲ್ಲಿಂದೂ ಅಬ್ಬರಿಸಿದ ಕೊರೊನಾ, ಬೆಂಗಳೂರಿನಲ್ಲಿ 50 ಸಾವಿರದ ಗಡಿ ದಾಟಿದ ಸೋಂಕಿತರ ಸಂಖ್ಯೆ.. ಇಲ್ಲಿದೆ ನೋಡಿ...

ರಾಜ್ಯದಲ್ಲಿಂದೂ ಅಬ್ಬರಿಸಿದ ಕೊರೊನಾ, ಬೆಂಗಳೂರಿನಲ್ಲಿ 50 ಸಾವಿರದ ಗಡಿ ದಾಟಿದ ಸೋಂಕಿತರ ಸಂಖ್ಯೆ.. ಇಲ್ಲಿದೆ ನೋಡಿ ಇಂದಿನ ಕೋವಿಡ್ ಅಂಕಿ ಅಂಶ…

- Advertisement -
- Advertisement -

ಬೆಂಗಳೂರು : ರಾಜ್ಯದಲ್ಲಿ ಇಂದು ಕೂಡ ಕೊರೊನಾ ಅಬ್ಬರಿಸಿ ಬೊಬ್ಬಿರಿದಿದೆ. ಇಂದು ಬರೋಬ್ಬರಿ 5,503 ಹೊಸ ಪ್ರಕರಣಗಳು ರಾಜ್ಯದಲ್ಲಿ ವರದಿಯಾಗಿವೆ. ಆ ಮೂಲಕ ಸೋಂಕಿತರ ಸಂಖ್ಯೆ 1,12,504ಕ್ಕೆ ಏರಿಕೆಯಾಗಿದೆ. ಹಾಗೇ ಇಂದು ಒಂದೇ ದಿನ 92 ಮಂದಿಗೆ ಮಹಾಮಾರಿಗೆ ಬಲಿಯಾಗಿದ್ದಾರೆ. ಸದ್ಯ ರಾಜ್ಯದಲ್ಲಿ 67,448 ಸಕ್ರೀಯ ಪ್ರಕರಣಗಳಿದ್ದು, 42,901 ಮಂದಿ ಗುಣಮುಖರಾಗಿದ್ದಾರೆ. ಇನ್ನು ಇವತ್ತು ರಾಜ್ಯದಾದ್ಯಂತ 2397 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೂ ರಾಜ್ಯದಲ್ಲಿ 2,147 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.

ಇನ್ನು ಬೆಂಗಳೂರಿನಲ್ಲಿ ಇವತ್ತು 2,270 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 30 ಜನ ಕೋವಿಡ್ ಗೆ ಬಲಿಯಾಗಿದ್ದಾರೆ. ಈ ಮೂಲಕ ರಾಜಧಾನಿಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 51,091ಕ್ಕೆ ಏರಿಕೆಯಾಗಿದೆ. ಸದ್ಯ ರಾಜಧಾನಿಯಲ್ಲಿ 36,224 ಕೋವಿಡ್ ಸಕ್ರೀಯ ಪ್ರಕರಣಗಳಿದ್ದು, 13,879 ಮಂದಿ ಗುಣಮುಖರಾಗಿದ್ದಾರೆ. ಇನ್ನು ಇಂದು ಒಂದೇ ದಿನ 1118 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇದುವೆರಗೂ ಬೆಂಗಳೂರಿನಲ್ಲಿ 987 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.

- Advertisement -

Latest News

error: Content is protected !!