Thursday, May 2, 2024
Homeತಾಜಾ ಸುದ್ದಿ5,8,9,11ನೇ ತರಗತಿ ಬೋರ್ಡ್ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ; ಸುಪ್ರೀಂ ಕೋರ್ಟ್ ವಕೀಲರಿಂದ ಕರ್ನಾಟಕ ಸರ್ಕಾರಕ್ಕೆ...

5,8,9,11ನೇ ತರಗತಿ ಬೋರ್ಡ್ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ; ಸುಪ್ರೀಂ ಕೋರ್ಟ್ ವಕೀಲರಿಂದ ಕರ್ನಾಟಕ ಸರ್ಕಾರಕ್ಕೆ ತರಾಟೆ

spot_img
- Advertisement -
- Advertisement -

ಹೊಸದಿಲ್ಲಿ:ರಾಜ್ಯ ಪಠ್ಯಕ್ರಮದ ಶಾಲೆಗಳ 5, 8, 9ನೇ ಮತ್ತು 11ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರದಂದು ತಡೆ ನೀಡಿದೆ

ಕರ್ನಾಟಕ ಸರ್ಕಾರದ ವಕೀಲರಿಗೆ ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದ್ದು, “ನೀವು ದೇಶದ ಸಂಪೂರ್ಣ ಶಿಕ್ಷಣ ವ್ಯವಸ್ಥೆಯನ್ನು ಹಾಳು ಮಾಡಿದ್ದೀರಿ. ಈಗ ನೀವು ಅದನ್ನು ಸಂಕೀರ್ಣಗೊಳಿಸಲು ಬಯಸುತ್ತೀರಿ. ದಯವಿಟ್ಟು ಹಾಗೆ ಮಾಡಬೇಡಿ” ಎಂದು ತಿಳಿಸಿದ್ದಾರೆ.

ಫಲಿತಾಂಶ ಪ್ರಕಟಣೆಗೆ ನ್ಯಾಯಮೂರ್ತಿಗಳಾದ ಬೇಲಾ ಎಂ.ತ್ರಿವೇದಿ ಮತ್ತು ಪಂಕಜ್ ಮಿಥಾಲ್ ಅವರನ್ನೊಳಗೊಂಡ ನ್ಯಾಯಪೀಠವು ತಡೆ ನೀಡಿದೆ. ಈ ಹಿಂದೆ ಕರ್ನಾಟಕ ಹೈಕೋರ್ಟ್‌ ನಿರ್ದೇಶನದ ಮೇರೆಗೆ ಕಳೆದ ತಿಂಗಳು ಬೋರ್ಡ್ ಪರೀಕ್ಷೆ ನಡೆಸಲಾಗಿತ್ತು.

5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಮಾರ್ಚ್​ 22ರಂದು ನ್ಯಾಯಮೂರ್ತಿ ಕೆ.ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಕೆ.ರಾಜೇಶ್ ರೈ ಅವರಿದ್ದ ವಿಭಾಗೀಯ ಪೀಠ ಎತ್ತಿಹಿಡಿದಿತ್ತು.

ಆದರೆ ಇದೀಗ ಯಾವುದೇ ಶಾಲೆಗಳು ಕೂಡ ಫಲಿತಾಂಶವನ್ನು ಪ್ರಕಟಿಸಬಾರದು. ಫಲಿತಾಂಶ ಪ್ರಕಟಿಸಬೇಕಾದರೆ ಮುಂದಿನ ಆದೇಶದವರೆಗೆ ಕಾಯಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

- Advertisement -
spot_img

Latest News

error: Content is protected !!