Sunday, May 19, 2024
Homeಇತರ6-8 ನೇ ತರಗತಿಯ ವೇಳಾಪಟ್ಟಿ ಪ್ರಕಟ...! ವಿದ್ಯಾರ್ಥಿಗಳಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ...!

6-8 ನೇ ತರಗತಿಯ ವೇಳಾಪಟ್ಟಿ ಪ್ರಕಟ…! ವಿದ್ಯಾರ್ಥಿಗಳಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ…!

spot_img
- Advertisement -
- Advertisement -

ರಾಜ್ಯದಲ್ಲಿ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲೆಗಳಲ್ಲಿ 6ರಿಂದ 8ನೇ ತರಗತಿಗಳನ್ನು ಇದೇ 6ರಿಂದ ಆರಂಭಿಸುವ ಸಂಬಂಧ ವೇಳಾಪಟ್ಟಿ ಸಹಿತ ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳವಾರ ಸುತ್ತೋಲೆ ಹೊರಡಿಸಿದೆ.

ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದೆ. ದಿನಾಂಕ 06-09-2021ರಿಂದ ರಾಜ್ಯದಲ್ಲಿ ಕೋವಿಡ್-19ರ ಸೋಂಕಿನ ಪ್ರಮಾಣ ಶೇ.2ಕ್ಕಿಂತ ಕಡಿಮೆ ಇರುವ ತಾಲೂಕು, ವಲಯಗಳಲ್ಲಿ 9 ಮತ್ತು 10ನೇ ತರಗತಿಗಳ ಜೊತೆಗೆ 6 ರಿಂದ 8ನೇ ತರಗತಿಗಳನ್ನು ಪೂರ್ಣ ಪ್ರಮಾಣದಲ್ಲಿ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಭೌತಿಕವಾಗಿ ಪ್ರಾರಂಭಿಸಲು ಹಾಗೂ 1 ರಿಂದ 5ನೇ ತರಗತಿಗಳನ್ನು ಪ್ರಾರಂಭಿಸುವ ಬಗ್ಗೆ ಪರಿಸ್ಥಿತಿ ನಂತ್ರ ನಿರ್ಧರಿಸಲಾಗುವುದು ಎಂಬುದಾಗಿ ಮುಖ್ಯಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದಂತ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆ ಪ್ರತ್ಯೇಕವಾಗಿರುವ ಕಡೆಗಳಲ್ಲಿ 6ರಿಂದ 8ನೇ ತರಗತಿಗಳನ್ನು ಬೆಳಿಗ್ಗೆ ನಡೆಸಬೇಕು. ಪ್ರೌಢ ಶಾಲೆಯ ಜೊತೆಗೆ 8ನೇ ತರಗತಿ ಇರುವ ಶಾಲೆಗಳಲ್ಲಿ 8ನೇ ತರಗತಿಯನ್ನು ಮಧ್ಯಾಹ್ನ 2 ಗಂಟೆಯಿಂದ ಸಂಜೆ 4.30ರವರೆಗೆ 45 ನಿಮಿಷಗಳ ಮೂರು ಅವಧಿ ನಡೆಸಬೇಕು ಎಂದು ಇಲಾಖೆ ಸಲಹೆ ನೀಡಿದೆ.

- Advertisement -
spot_img

Latest News

error: Content is protected !!