Wednesday, June 24, 2026
Homeತಾಜಾ ಸುದ್ದಿತಿರುಪತಿ ತಿಮ್ಮಪ್ಪನ ಸನ್ನಿಧಾನದಲ್ಲಿ ಭಾರೀ ಕಾಲ್ತುಳಿತ;  ಆರು ಜನ ಭಕ್ತರು ಸಾವು

ತಿರುಪತಿ ತಿಮ್ಮಪ್ಪನ ಸನ್ನಿಧಾನದಲ್ಲಿ ಭಾರೀ ಕಾಲ್ತುಳಿತ;  ಆರು ಜನ ಭಕ್ತರು ಸಾವು

- Advertisement -
- Advertisement -

ತಿರುಪತಿ ತಿಮ್ಮಪ್ಪನ ಸನ್ನಿಧಾನದಲ್ಲಿ ಭಾರೀ ಕಾಲ್ತುಳಿತ ಉಂಟಾಗಿ ಆರು ಜನ ಭಕ್ತರು ಸಾವನ್ನಪ್ಪಿದ್ದಾರೆ. ವೈಕುಂಠ ‌ಏಕಾದಶಿ ಹಿನ್ನೆಲೆಯಲ್ಲಿ ‌ಭಕ್ತರು ಹೆಚ್ಚಿರುವ ಕಾರಣ ತಿರುಪತಿಯಲ್ಲಿ ಕಾಲ್ತುಳಿತ ಉಂಟಾಗಿದೆ. ಪರಿಣಾಮ 6 ಮಂದಿ ಸಾವು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಹಲವವರು ಗಂಭೀರವಾಗಿ ಗಾಯಗೊಂಡಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ. ಭಕ್ತಾದಿಗಳು ತಿರುಪತಿಯ ವೈಕುಂಠ ದ್ವಾರ ದರ್ಶನದ ಟಿಕೆಟ್‌ ತೆಗೆದುಕೊಳ್ಳುವ ವೇಳೆ ನೂಕುನುಗ್ಗಲು ಉಂಟಾಗಿದೆ.

ಟಿಕೆಟ್‌ ಪಡೆದುಕೊಳ್ಳಲು ಏಕಕಾಲಕ್ಕೆ ಸಾವಿರಾರು ಮಂದಿ ನುಗ್ಗಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಮೂರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದರೆ ಉಳಿದ ಮೂವರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾರೆ. ಟೋಕನ್‌ಗಾಗಿ 4 ಸಾವಿರಕ್ಕೂ ಅಧಿಕ ಭಕ್ತರು ನೆರೆದಿದ್ದರು ಎನ್ನಲಾಗಿದೆ.

- Advertisement -

Latest News

error: Content is protected !!